ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಡಿ.2ರಂದು ರಾಜ್ಯದ ಎಲ್ಲ ವಿಶೇಷ ಶಾಲೆಗಳ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಮುಷ್ಕರ

ಉಡುಪಿ: ನವೆಂಬರ್ ಅಂತ್ಯದೊಳಗಾಗಿ ರಾಜ್ಯದ ವಿಶೇಷ ಶಾಲೆಗಳಲ್ಲಿ ಸೇವಾ ನಿರತರಾಗಿರುವ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರ ಸಿಬ್ಬಂದಿಯ ಗೌರವ ದ್ವಿಗುಣಗೊಳಿಸಲು ಕ್ರಮ ಕೈಗೊಳ್ಳಬೇಕಾಗಿ ಮುಖ್ಯಮಂತ್ರಿಗಳಿಗೆ, ಸಚಿವರಿಗೆ ಹಾಗೂ ಸಂಬಂಧಿತ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು.

ಆದರೆ, ಈ ಮನವಿಗೆ ಇಲಾಖೆಯಿಂದಾಗಲಿ, ಸರಕಾರದಿಂದಲೀ ಸಕಾರಾತ್ಮಕ ಸ್ಪಂದನೆ ದೊರೆಯಲಿಲ್ಲ. ಹೀಗಾಗಿ ಕರ್ನಾಟಕ ರಾಜ್ಯ ವಿಶೇಷ ಶಿಕ್ಷಕರ ಹಾಗೂ ಶಿಕ್ಷಕೇತರರ ಸಂಘ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಸೇವಾ ಸಂಸ್ಥೆಗಳ ಒಕ್ಕೂಟ ನೀಡಿದ ಕರೆಯಂತೆ ಡಿಸೆಂಬರ್ 2ರಂದು ರಾಜ್ಯದ ಎಲ್ಲ ವಿಶೇಷ ಶಾಲೆಗಳ ವಿಶೇಷ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ರಾಜ್ಯದ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಒಂದು ದಿನದ ಸಾಂಕೇತಿಕ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ರಾಜ್ಯಾಧ್ಯಕ್ಷೆ ಡಾ.ಕಾಂತಿ ಹರೀಶ್ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಂಘದ ಪದಾಧಿಕಾರಿಗಳು, ಇಲಾಖೆಯಿಂದ ಅಥವಾ ಸರಕಾರದಿಂದ ಆದೇಶ ಜಾರಿಯಾಗದಿದ್ದಲ್ಲಿ ಮುಂದಿನ ದಿನಗಳಲ್ಲಿ ತೀವ್ರ ಹೋರಾಟ ನಡೆಯಲಿದೆ ಎಂದರು.

ವಿಶೇಷ ಶಾಲಾ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ಸಮಸ್ಯೆಗೆ ಸರಕಾರದಿಂದ ಯಾವುದೇ ಸ್ಪಂದನೆ ದೊರೆಯುತ್ತಿಲ್ಲ. ಸಚಿವೆ ಶಶಿಕಲಾ ಜೊಲ್ಲೆಯವರನ್ನು ಈ ವಿಚಾರವಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಕಷ್ಟು ಬಾರಿ ಭೇಟಿ ಮಾಡಿ ಮನವರಿಕೆ ಮಾಡಿಕೊಂಡೆವು.

ಈ ಬಗ್ಗೆ ಭರವಸೆ ನೀಡಿರುವ ಸಚಿವರು, ನಮ್ಮನ್ನು ಕರೆದು ಸಭೆ ನಡೆಸುವುದಾಗಿ ಹೇಳಿದ್ದರು. ಆದರೆ, ನಮ್ಮನ್ನು ನಿರ್ಲಕ್ಷ್ಯ ಮಾಡಿದ್ದರಿಂದ ಮುಷ್ಕರಕ್ಕೆ ಮುಂದಾಗಿದ್ದೇವೆ ಎಂದರು. ಸುದ್ದಿಗೋಷ್ಠಿಯಲ್ಲಿ ಡಾ.ವಸಂತ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

24/11/2020 12:57 pm

Cinque Terre

9.17 K

Cinque Terre

0

ಸಂಬಂಧಿತ ಸುದ್ದಿ