ಬಂಟ್ವಾಳ: ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿಗೆ ಜಿಲ್ಲಾ ಉಸ್ತುವಾರಿ,ಮುಜರಾಯಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭೇಟಿ ನೀಡಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಜೊತೆ ಆಡಳಿತ ಮಂಡಳಿಯ ಸಭೆ ನಡೆಸಿ ದೇಗುಲದಲ್ಲಿ ಮುಂದಿನ ದಿನಗಳಲ್ಲಿ ನಡೆಯಬೇಕಾದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಚರ್ಚಿಸಿದರು.
ಈ ಸಂದರ್ಭ ದೇಗುಲದ ಕಾರ್ಯನಿರ್ವಹಣಾಧಿಕಾರಿ, ಅನುವಂಶೀಯ ಮೊಕ್ತೇಸರರುಗಳಾದ ಅಮ್ಮುಂಜೆಗುತ್ತು, ಉಳಿಪ್ಪಾಡಿಗುತ್ತು, ಚೇರಾ ಮನೆತನದವರು, ಕ್ಷೇತ್ರದ ಪವಿತ್ರಪಾಣಿ,ತಂತ್ರಿವರ್ಗದವರು ಉಪಸ್ಥಿತರಿದ್ದರು.
Kshetra Samachara
24/11/2020 04:59 pm