ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ರಾಜ್ಯ, ಕೇಂದ್ರ ಸರಕಾರಗಳ ಕಾರ್ಮಿಕ ವಿರೋಧ ನೀತಿ ಖಂಡಿಸಿ ಪ್ರತಿಭಟನೆ

ಮಂಗಳೂರು: ಅಖಿಲ ಭಾರತ ಸಾರ್ವತ್ರಿಕ ಮುಷ್ಕರ ಅಂಗವಾಗಿ ನಗರದ ಮಿನಿ ವಿಧಾನಸೌಧ ಮುಂಭಾಗ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಸಿಐಟಿಯು ಮುಖಂಡ ಸುನಿಲ್ ಕುಮಾರ್ ಬಜಾಲ್ ಮಾತನಾಡಿ, ಇಂದಿಗೂ ಕಾರ್ಮಿಕರು ಕನಿಷ್ಠ ಕೂಲಿ ಪಡೆಯದೇ ದುಡಿಯುವ ಪರಿಸ್ಥಿತಿ ಇದೆ.

ಇಂತಹ ಸಂದರ್ಭದಲ್ಲಿ ಸರಕಾರ ಸಾರ್ವಜನಿಕ ಉದ್ದಿಮೆಗಳನ್ನ ಕಾರ್ಪೊರೇಟ್ ಕಂಪೆನಿಗಳ ಕೈಗಿತ್ತು ಇನ್ನಷ್ಟು ಸಂಕಷ್ಟಕ್ಕೆ ತಳ್ಳುತ್ತಿದೆ. ಆದ್ದರಿಂದ ಇದರ ವಿರುದ್ಧ ಸಂಘಟಿತ ಹೋರಾಟದ ಅಗತ್ಯವಿದೆ ಎಂದರು. ಅಖಿಲ ಭಾರತ ಬ್ಯಾಂಕ್ ನೌಕರರ ಯೂನಿಯನ್ ಜಿಲ್ಲಾ ಮುಖಂಡ ವಿನ್ಸೆಂಟ್ ಡಿಸೋಜಾ ಮಾತನಾಡಿ, ನಗರದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ ರಸ್ತೆಗಳಿಗೆ ಹೆಸರಡಿಲು ಜನಪ್ರತಿನಿಧಿಗಳು ತೋರುತ್ತಿರುವ ಉತ್ಸುಕತೆ ನೋಡುತ್ತಿದ್ದರೆ,

ಬ್ಯಾಂಕ್ ವಿಲೀನ ಸಂದರ್ಭದಲ್ಲಿ ಕಾಣದೇ ಹೋದದ್ದು ನಮ್ಮ ದುರಂತವೆಂದು ಎನಿಸುತ್ತದೆ ಎಂದರು. ಪ್ರತಿಭಟನೆಯಲ್ಲಿ ವಸಂತ ಆಚಾರಿ, ಮುನೀರ್ ಕಾಟಿಪಳ್ಳ, ವಾಸುದೇವ ಉಚ್ಚಿಲ, ರವಿಕಿರಣ್ ಪುಣಚ ಮತ್ತಿತ್ತರರು ಉಪಸ್ಥಿತರಿದ್ದರು.

Edited By :
Kshetra Samachara

Kshetra Samachara

26/11/2020 08:07 pm

Cinque Terre

9.43 K

Cinque Terre

1

ಸಂಬಂಧಿತ ಸುದ್ದಿ