ಮಂಗಳೂರು: ಕದ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ನಿಷೇಧಿತ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನ ಖಂಡಿಸಿ ನಗರದ ಕದ್ರಿ ಠಾಣಾ ಬಳಿ ಎಬಿವಿಪಿ ಕಾರ್ಯಕರ್ತರು ತೀವ್ರ ಪ್ರತಿಭಟನೆ ನಡೆಸಿದರು. ಪಂಜು ಹಿಡಿದು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ರಸ್ತೆ ಬಳಿ ಟೈರ್ ಗೆ ಬೆಂಕಿ ಹಚ್ಚಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣವೇ ಆರೋಪಿಗಳ ಶೀಘ್ರ ಬಂಧನಕ್ಕೆ ಒತ್ತಾಯಿಸಿದ ಪ್ರತಿಭಟನಾಕಾರರು ದೇಶದ್ರೋಹಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು..
Kshetra Samachara
27/11/2020 07:19 pm