ಮಂಗಳೂರು: ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದೊಳಗೆ ಯಾವುದೇ ಗೊಂದಲವಿಲ್ಲ. ಸಚಿವ ಸ್ಥಾನಕ್ಕೆ ಅಪೇಕ್ಷೆ ಪಡೋದು ತಪ್ಪಲ್ಲ. ಆದರೆ ಅಂತಿಮವಾಗಿ ವರಿಷ್ಠರ ತೀರ್ಮಾನಕ್ಕೆ ಬದ್ಧವಾಗಿರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ನಗರದಲ್ಲಿ ಡಿಸಿಎಂ ಅಶ್ವತ್ಥನಾರಾಯಣ ಜೊತೆ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸಿಎಂ ಬದಲಾವಣೆಗೆ ಬಗ್ಗೆಯೂ ಯಾವ ಹಂತದಲ್ಲೂ ಚರ್ಚೆ ನಡೆದಿಲ್ಲ, ಯಾವ ನಾಯಕರು ಸಿಎಂ ಸ್ಥಾನ ಕುರಿತು ಚರ್ಚಿಸಿಲ್ಲ ಎಂದರು. ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದ ಡಿಸಿಎಂ ಅಶ್ವತ್ಥ ನಾರಾಯಣ ಕೂಡಾ ಇದೇ ಅಭಿಪ್ರಾಯ ವ್ಯಕ್ತಪಡಿಸಿದರು.
Kshetra Samachara
28/11/2020 11:59 am