ಉಡುಪಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ಆಯ್ಕೆಯಾದ ಬಳಿಕ ಇದೇ ಮೊದಲ ಬಾರಿಗೆ ಇಂದು ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಉಡುಪಿ ಜಿಲ್ಲೆಯ ಶೀರೂರಿಗೆ ಇಂದು ಸಂಜೆ ಆಗಮಿಸುವ ಡಿಕೆಶಿ, ಕಮಲಶಿಲೆ ದೇವಸ್ಥಾನಕ್ಕೆ ತೆರಳಿ ಅಲ್ಲಿ ಪೂಜೆ ಸಲ್ಲಿಸಲಿದ್ದಾರೆ.
ಅಲ್ಲಿಂದ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತೆರಳಿ ರಾತ್ರಿ ಅಲ್ಲೇ ವಾಸ್ತವ್ಯ ಹೂಡಲಿದ್ದಾರೆ.ನಾಳೆ ಬೆಳಿಗ್ಗೆ ಕೊಲ್ಲೂರಿನಲ್ಲಿ ವಿಶೇಷ ಪೂಜೆಯಲ್ಲಿ ಭಾಗವಹಿಸಿ ಅಲ್ಲಿಂದ ಉಡುಪಿಗೆ ಆಗಮಿಸಲಿದ್ದಾರೆ. ಉಡುಪಿಯಲ್ಲಿ ಡಿಕೆ ಶಿವಕುಮಾರ್ ಬೃಹತ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಅಲ್ಲಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾ ಕಾಂಗ್ರೆಸ್ ತಮ್ಮ ನಾಯಕನನ್ನು ಸ್ವಾಗತಿಸಲು ಸಾಕಷ್ಟು ತಯಾರಿ ಮಾಡಿಕೊಂಡಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದ್ದಾರೆ.
Kshetra Samachara
28/11/2020 12:08 pm