ಕಾಪು: ಕಾಪು ವಿಧಾನಸಭಾ ಕ್ಷೇತ್ರದ ಬೆಳಪುವಿನಲ್ಲಿ ರಾಜ್ಯಕ್ಕೇ ಮಾದರಿಯಾಗುವಂತೆ ವಿಜ್ಞಾನ ಸಂಶೋಧನಾ ಕೇಂದ್ರ, ಸರಕಾರಿ ಸಣ್ಣ ಕೈಗಾರಿಕಾ ಪಾರ್ಕ್ ನಿರ್ಮಾಣವಾಗುತ್ತಿರುವುದು ಸ್ವಾಗತಾರ್ಹವಾಗಿದೆ. ಇದಕ್ಕೆ ಪೂರಕವಾಗಿ ವಿವಿಧ ಮೂಲಗಳಿಂದ ಸಂಪನ್ಮೂಲಗಳನ್ನು ಕ್ರೋಡಿಸಿಕರಿಸಿಕೊಂಡು ವೇಗವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಿ, ಲೋಕಾರ್ಪಣೆಗೊಳಿಸಲು ಪ್ರಯತ್ನಿಸುವುದಾಗಿ ರಾಜ್ಯದ ಉಪಮುಖ್ಯಮಂತ್ರಿ ಅಶ್ವಥ್ ನಾರಾಯಣ ಹೇಳಿದರು.
ಬೆಳಪು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಮಂಗಳೂರು ವಿವಿ ಸಂಯೋಜಿತ ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಪರಿಶೀಲಿಸಿ, ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರದ ಕಟ್ಟಡ ಕಾಮಗಾರಿ ವೇಗವಾಗಿ ನಡೆಯುತ್ತಿದೆ. ಕಟ್ಟಡ ನಿರ್ಮಾಣ ಪೂರ್ಣಗೊಳ್ಳುವ ಹಂತದಲ್ಲಿ ಇದಕ್ಕೆ ಪೂರಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಲಭ್ಯವಿರುವ ಮತ್ತು ಇಲ್ಲಿನ ಯುವಜನರ ಬೇಡಿಕೆಗಳನ್ನು ಅರಿತುಕೊಂಡು ವ್ಯವಸ್ಥೆಗಳನ್ನು ಜೋಡಿಸಿಕೊಡಲಾಗುವುದು. ಆ ಮೂಲಕ ಕಾಪು ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯಾಗುವ ಶೈಕ್ಷಣಿಕ ಅಭಿವೃದ್ಧಿ ಹೊಂದಿದ ಕೇತ್ರವನ್ನಾಗಿ ಪರಿವರ್ತಿಸಲು ಪ್ರಯತ್ನಿಸಲಾಗುವುದು ಎಂದರು.
Kshetra Samachara
28/11/2020 10:17 pm