ಮುಲ್ಕಿ: ಮುಲ್ಕಿಯ ಇತಿಹಾಸ ಪ್ರಸಿದ್ಧ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಸಂಜೆ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.
ದೇವಳದ ಅನುವಂಶಿಕ ಮೊಕ್ತೇಸರ ದುಗ್ಗಣ್ಣ ಸಾವಂತರು, ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ನೇತೃತ್ವದಲ್ಲಿ ಡಿ.ಕೆ.ಶಿ. ಅವರನ್ನು ದೇವಳದ ವತಿಯಿಂದ ಗೌರವಿಸಲಾಯಿತು. ತರಾತುರಿಯಲ್ಲಿ ಕೊನೆಕ್ಷಣದಲ್ಲಿ ಪ್ರಥಮ ಬಾರಿಗೆ ಬಪ್ಪನಾಡು ದೇವಸ್ಥಾನಕ್ಕೆ ಭೇಟಿ ನೀಡಿದ ಡಿಕೆಶಿ ಅವರನ್ನು ಮಾಜಿ ಸಚಿವ ಅಭಯಚಂದ್ರ ಜೈನ್, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಹಾಗೂ ಮುಲ್ಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಧನಂಜಯ ಮಟ್ಟು ಸ್ವಾಗತಿಸಿದರು.
ಉಡುಪಿ ಜಿಲ್ಲೆ ಪ್ರವಾಸದಲ್ಲಿದ್ದ ಡಿಕೆಶಿ, ಸಂಜೆ 4 ಗಂಟೆಗೆ ಬಪ್ಪನಾಡು ದೇವಳಕ್ಕೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿದ್ದು, ಬರುವಾಗ ಬರೋಬ್ಬರಿ 6.45 ಆಗಿದ್ದರೂ ಕಾರ್ಯಕರ್ತರ ಉತ್ಸಾಹ ಕಡಿಮೆಯಾಗಿರಲಿಲ್ಲ. ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಡಾ. ರಾಜಶೇಖರ್ ಕೋಟ್ಯಾನ್, ಕೆಪಿಸಿಸಿ ಕೋ-ಆರ್ಡಿನೇಟರ್ ವಸಂತ್ ಬ ಬೆರ್ನಾಡ್, ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
29/11/2020 09:12 pm