ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: 'ಉಗ್ರ' ಪರ ಗೋಡೆ ಬರಹದ ಆರೋಪಿಗಳ ಶೀಘ್ರ ಬಂಧನ: ಗೃಹ ಸಚಿವರ ಭರವಸೆ

ಮಂಗಳೂರು: ಮಂಗಳೂರಿನಲ್ಲಿ ಲಷ್ಕರ್ ಪರ ಗೋಡೆ ಬರಹದ ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಸಚಿವರು, ಅಂತಾರಾಷ್ಟ್ರೀಯ ಮಟ್ಟದ ಉಗ್ರವಾದ ಮಾಡುವವರ ಮಾದರಿ ಇದೇ ಆಗಿದೆ. ಹೆಚ್ಚೆಚ್ಚು ಗಲಭೆ, ಉಗ್ರರ ಕೃತ್ಯಗಳಾದ ಪ್ರದೇಶದಲ್ಲಿ ಈ ರೀತಿ ಗೋಡೆ ಬರಹ ಬರೆಯಲಾಗಿತ್ತು. ಕಾಶ್ಮೀರ, ಇರಾಕ್, ಇರಾನ್ ದೇಶದಲ್ಲೂ ಈ ರೀತಿ ಗೋಡೆ ಬರಹ ಬರೆಯಲಾಗಿತ್ತು. ಉಗ್ರರು ತಮ್ಮ ಕೃತ್ಯ ಮಾಡುವ ಮೊದಲು ಈ ರೀತಿ ಬರೆಯುತ್ತಾರೆ. ಇದೇ ರೀತಿಯ ಸಣ್ಣ ಪ್ರಯತ್ನ ಮಂಗಳೂರಿನಲ್ಲಿ ನಡೆದಿದೆ. ಈಗಾಗಲೇ ಪ್ರಕರಣ ಸಂಬಂಧ ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ.

ಅತಿ ಶೀಘ್ರವೇ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದರು.

Edited By : Nagesh Gaonkar
Kshetra Samachara

Kshetra Samachara

03/12/2020 11:46 am

Cinque Terre

10.35 K

Cinque Terre

3