ಉಡುಪಿ: ರಾಜ್ಯದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ವಿಚಾರದಲ್ಲಿ ನಮ್ಮಲ್ಲಿ ಯಾವುದೇ ಗೊಂದಲಗಳು ಇಲ್ಲ.ಕರ್ನಾಟಕದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನು ಬಂದೇ ಬರುತ್ತದೆ.ಅಲಹಾಬಾದ್ ಹೈಕೋರ್ಟ್ ಲವ್ ಜಿಹಾದ್ ವಿಚಾರದಲ್ಲಿ ಆದೇಶ ಕೊಟ್ಟಿದೆ.ಯು.ಪಿ, ಹರಿಯಾಣ ಮಧ್ಯಪ್ರದೇಶದಲ್ಲಿ ಜಾರಿಗೆ ತರುವ ಚಿಂತನೆ ಮಾಡಿದೆ.
ಕರ್ನಾಟಕ ಸರ್ಕಾರ ಕೂಡ ಈ ಬಗ್ಗೆ ಚಿಂತನೆಯನ್ನು ನಡೆಸಿದೆ.ಲವ್ ಜಿಹಾದ್ ಕಾನೂನು ಹೇಗೆ ಜಾರಿಗೆ ತರಬೇಕು ಯಾವ ಅಂಶಗಳನ್ನು ಸೇರಿಸಬೇಕೆಂಬೂದು ಮುಖ್ಯ ಉತ್ತರಪ್ರದೇಶ ಸರಕಾರ ಅಧಿಸೂಚನೆಯನ್ನು ಹೊರಡಿಸಿಯಾಗಿದೆ. ಯುಪಿ ಸರ್ಕಾರ ಹೊರಡಿಸುವ ಅಧಿಸೂಚನೆಯ ಪ್ರತಿಗಳನ್ನು ಪಡೆದುಕೊಳ್ಳಲು ಅಧಿಕಾರಿಗಳಿಗೆ ಹೇಳಿದ್ದೇನೆ.ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇದನ್ನು ಒಪ್ಪಿದ್ದಾರೆ.
ಮಂಗಳೂರು ನಲ್ಲಿ ನಡೆದ ಕಾರ್ಯಕಾರಿಣಿಯಲ್ಲಿ ಇದನ್ನು ಘೋಷಣೆ ಮಾಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.ಉಡುಪಿಯಲ್ಲಿ ಮಾತನಾಡಿದ ಅವರು,ಸಿದ್ದರಾಮಯ್ಯನವರು ಮೊಗಲ್ ಶಕೆಯಲ್ಲಿ ಬದುಕುತ್ತಿದ್ದಾರೆ.ಮುನ್ನೂರು ವರ್ಷದಿಂದ ಲವ್ ಜಿಹಾದ್ ಇದೆ ಅಂತ ಸಿದ್ದರಾಮಯ್ಯ ಹೇಳಿದ್ದಾರೆ.ಸಿದ್ದರಾಮಯ್ಯ ಇನ್ನೂ ಮೊಘಲ್ ಶಕೆಯಲ್ಲಿ ಇದ್ದಾರೆ ಎಂದು ಹೇಳಬಯಸುತ್ತೇನೆ ಎಂದು ಲೇವಡಿ ಮಾಡಿದರು.
Kshetra Samachara
03/12/2020 12:14 pm