ಮಂಗಳೂರು: ಅಖಿಲ ಭಾರತ ಹಿಂದೂ ಮಹಾಸಭಾ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಡಿಸೆಂಬರ್ 10 ರಂದು ಮರವೂರು ಕಪಿಲಾ ಗೋಶಾಲೆ ಉಳಿಸಿ, ರಾಜ್ಯದಲ್ಲಿ ಗೋ ಹತ್ಯೆ ನಿಷೇಧಿಸಿ ಎಂದು ಒತ್ತಾಯಿಸಿ ಪಾದಯಾತ್ರೆ ನಡೆಯಲಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅಖಿಲ ಭಾರತ ಹಿಂದೂ ಮಹಸಭಾದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಲೋಕೇಶ್ ಉಳ್ಳಾಲ್, ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಕೂಡಲೇ ಜಾರಿಯಾಗಬೇಕು.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಳಿವಿನಂಚಿನಲ್ಲಿರುವ ತಳಿಯ ಗೋವುಗಳನ್ನು ನಿಸ್ವಾರ್ಥವಾಗಿ ಸಾಕುತ್ತಿರುವ ಮರವೂರಿನ ಕಪಿಲಾ ಗೋಶಾಲೆಯನ್ನು KEDB ಯ ಅಧಿಕಾರಿ ಬಂದು ಈ ಗೋಶಾಲೆ ತೆರವುಗೊಳಿಸಿ ಕಟ್ಟಡವನ್ನು ಹೊಡೆದು ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ರು.
ಮುಂದಿನ 1 ವಾರದಲ್ಲಿ ತೆರವುಗೊಳಿಸದಿದ್ದಲ್ಲಿ ಹಸುಗಳನ್ನು ಲಾರಿ ತಂದು ತುಂಬಿಸಿ ಕೊಂಡೊಯ್ಯುತ್ತೇವೆ ಎಂದು ಬೆದರಿಕೆ ಹಾಕಿರುವ ಬಿನೋಯ್ ಎಂಬ ಅಧಿಕಾರಿ ಅಮಾನತು ಮಾಡಬೇಕು ಎಂದು ಆಗ್ರಹಿಸಿದರು.
ಗೋಶಾಲೆಯಲ್ಲಿ ಕಾರ್ಯಾಚರಣೆಗೆ ಯಾವುದೇ ಅಡ್ಡಿ ಪಡಿಸಬಾರದು ಎಂದು ಒತ್ತಾಯಿಸಿ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ ಮುಂಭಾಗದಿಂದ 10 ರ ಬೆಳಿಗ್ಗೆ 10 ಗಂಟೆಗೆ ಪ್ರಾರಂಭವಾಗಿ ಮರವೂರು ಕೆಂಜಾರಿನ ಪೇಜಾವರ ಕಪಿಲಾ ಗೋಪಾರ್ಕ್‌ನವರೆಗೆ ನಡೆಯುವ ಪಾದಯಾತ್ರೆ ಮೂಲಕ ಜನಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು..
Kshetra Samachara
03/12/2020 07:01 pm