ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಗ್ರಾಮ ಪಂಚಾಯತ್ ‍ಚುನಾವಣೆಗೆ ಸಕಲ ಸಿದ್ದತೆ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 220 ಗ್ರಾಮ ಪಂಚಾಯತ್ ಗಳ ಚುನಾವಣೆಯು 1,527 ಮತಗಟ್ಟೆಗಳಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆವಿ.ರಾಜೇಂದ್ರ ತಿಳಿಸಿದ್ದಾರೆ. ಡಿಸಿ‌ ಕಚೇರಿಯ ಸಭಾಂಗಣದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮುಂಬರುವ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10,39,217 ಮತದಾರರಿದ್ದಾರೆ. ಅದರಲ್ಲಿ 5,12,908 ಪುರುಷರು, 5,26,288 ಮಹಿಳೆಯರು ಮತ್ತು 21 ಇತರ ವಿಭಾಗದ ಮತದಾರರಾಗಿದ್ದಾರೆ.

ಡಿಸೆಂಬರ್ 22 ಮತ್ತು 27 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 7 ರಂದು ಮೊದಲ ಹಂತದ ಚುನಾವಣೆಗೆ ಮತ್ತು ಡಿಸೆಂಬರ್ 11 ರಂದು ಎರಡನೇ ಹಂತದ ಚುನಾವಣೆಗೆ ಚುನಾವಣಾ ಅಧಿಸೂಚನೆ ನೀಡಲಾಗುವುದು ಎಂದರು. ಮೊದಲ ಹಂತದಲ್ಲಿ ಮಂಗಳೂರು, ಮೂಡಬಿದಿರೆ ಹಾಗೂ ಬಂಟ್ವಾಳ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ ಬೆಳ್ತಂಗಡಿ, ಪುತ್ತೂರು, ಸುಳ್ಯ ಮತ್ತು ಕಡಬಾ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಚುನಾವಣೆಗಾಗಿ 220 ಚುನಾವಣಾ ಅಧಿಕಾರಿಗಳನ್ನು ಮತ್ತು 233 ಸಹಾಯಕ ಚುನಾವಣಾ ಅಧಿಕಾರಿಗಳನ್ನು ನೇಮಿಸಲಾಗಿದೆ. ನಾವು ಚುನಾವಣೆಗೆ ಅಗತ್ಯವಾದ ಮತಪೆಟ್ಟಿಗೆಗಳ ವ್ಯವಸ್ಥೆಯನ್ನು ಮಾಡಿದ್ದೇವೆ. ಚುನಾವಣೆಗೆ 2,626 ಮತಪೆಟ್ಟಿಗೆಗಳಿವೆ" ಎಂದರು.

Edited By : Manjunath H D
Kshetra Samachara

Kshetra Samachara

07/12/2020 04:59 pm

Cinque Terre

16.3 K

Cinque Terre

2

ಸಂಬಂಧಿತ ಸುದ್ದಿ