ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸುಳ್ಯ: ಕೃಷಿ ಕಾಯಿದೆ ವಿರುದ್ಧ ಭುಗಿಲೆದ್ದ ಆಕ್ರೋಶ, ರಸ್ತೆ ತಡೆ

ಸುಳ್ಯ: ಸುಳ್ಯ ಹಾಗೂ ಕಡಬ ತಾಲೂಕಿನಲ್ಲಿ ರೈತ ಸಂಘದ ನೇತೃತ್ವದಲ್ಲಿ ಕೃಷಿ ಕಾಯಿದೆ- 2020 ರ ವಿರುದ್ಧ ಪ್ರತಿಭಟನೆ ಹಾಗೂ ರಸ್ತೆ ತಡೆ ನಡೆಯಿತು.

ಕೇಂದ್ರ ಸರಕಾರದ ಮೂರು ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಸುಳ್ಯ ಹಾಗೂ ಕಡಬದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸುಳ್ಯದಲ್ಲಿ ಪ್ರತಿಭಟನಾ ಜಾಥಾ ನಡೆಯಿತು. ರೈತ ಸಂಘ, ಹಸಿರು ಸೇನೆಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲ ನೀಡಿದವು. ಕಡಬದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಯಿತು.

ಸುಮಾರು 25 ನಿಮಿಷದ ವರೆಗೆ ಉಪ್ಪಿನಂಗಡಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯನ್ನು ತಡೆದು ಪ್ರತಿಭಟಿಸಲಾಯಿತು. ಬಳಿಕ ಉಪ ತಹಸೀಲ್ದಾರ್ ಮನೋಹರ್ ಕೆ.ಟಿ. ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

Edited By : Nagesh Gaonkar
Kshetra Samachara

Kshetra Samachara

08/12/2020 09:16 pm

Cinque Terre

10.53 K

Cinque Terre

1

ಸಂಬಂಧಿತ ಸುದ್ದಿ