ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ : ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಯ ಮಾಡುತ್ತೇವೆ ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿಕೆ !

ಕುಂದಾಪುರ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಶೇ.60 ರಷ್ಟು ಅನುದಾನಗಳು ಗ್ರಾಮ ಪಂಚಾಯಿತಿಗಳ ಮೂಲಕವೇ ಅನುಷ್ಠಾನವಾಗುವುದರಿಂದ ರಾಜಕೀಯ ಪಕ್ಷಗಳಿಗೆ ಅತ್ಯಂತ ಪ್ರಾಮುಖ್ಯ ಚುನಾವಣೆ ಇದಾಗಿರುವುದ್ದು, ಗ್ರಾಮ ಮಟ್ಟದಿಂದಲೇ ಪಕ್ಷ ಸಂಘಟನೆಗೆ ಕಾಂಗ್ರೆಸ್‌ ಪಕ್ಷ ಪ್ರಯತ್ನ ನಡೆಸಲಿದೆ ಎಂದು ಮಾಜಿ ಸಚಿವ ವಿನಯಕುಮಾರ ಸೊರಕೆ ಭರವಸೆ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಆರ್‌ಎನ್‌ಶೆಟ್ಟಿ ಸಭಾಂಗಣದ ಮಿನಿ ಹಾಲ್‌ನಲ್ಲಿ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯ ನೇತ್ರತ್ವದಲ್ಲಿ ನಡೆದ ಪಕ್ಷದ ಕಾರ್ಯಕರ್ತರ ಹಾಗೂ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಕೊರೊನಾ ಹೆಸರಿನಲ್ಲಿ ಭೃಷ್ಟಾಚಾರ ಮಾಡಿರುವುದೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ. ಜಾಗಟೆ ಬಾರಿಸುವುದು, ದೀಪ ಹಚ್ಚುವುದು, ಚಪ್ಪಾಳೆ ತಟ್ಟುವುದರಿಂದ ಕೊರೊನಾ ನಿಯಂತ್ರಣವಾಗಲೇ ಇಲ್ಲ. ಸಿದ್ಧರಾಮಯ್ಯ ಸರ್ಕಾರ ನೀಡಿದ ಅನ್ನಭಾಗ್ಯದ ಸಹಾಯ ದೊರಕದೆ ಇದ್ದರೆ ಎಷ್ಟೋ ಜನರು ಉಪವಾಸ ಬೀಳುವ ಸಾಧ್ಯತೆಗಳಿದ್ದವು.

ಮನ್‌ಮೋಹನ್‌ ಸಿಂಗ್‌ ಸರ್ಕಾರದ ಅವಧಿಯಲ್ಲಿ ನೇಮಕವಾದ ಆಶಾ ಕಾರ್ಯಕರ್ತೆಯರೇ ಕೊರೊನಾ ವಾರಿಯರ್ಸ್‌ ಆಗಿ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ. ನರೇಗಾ ಯೋಜನೆಯಿಂದಾಗಿ ಕೆಲಸವಿಲ್ಲದ ಗ್ರಾಮೀಣ ಭಾಗದ ಜನರಿಗೆ ಉದ್ಯೋಗವಕಾಶವಾಗಿದೆ. ಸಂಬಳ, ಪರಿಹಾರ, ಅಭಿವೃದ್ಧಿಗೆ ಅನುದಾನ ನೀಡಲು ಹಣ ಇಲ್ಲದೆ ಇರುವ ಸರ್ಕಾರ ರಾಜ್ಯದಲ್ಲಿ ಇದ್ದು, ಇಲ್ಲದಂತೆ ಇದೆ ಎಂದು ಲೇವಡಿ ಮಾಡಿದರು.

Edited By :
Kshetra Samachara

Kshetra Samachara

10/12/2020 10:13 am

Cinque Terre

10.92 K

Cinque Terre

1

ಸಂಬಂಧಿತ ಸುದ್ದಿ