ಕುಂದಾಪುರ : ಭಾವನಾತ್ಮಕವಾಗಿ ಸುಳ್ಳು ಹೇಳಿ ಜನರನ್ನು ದಾರಿತಪ್ಪಿಸುವುದು ಬಿಜೆಪಿಯ ತಂತ್ರ ಆದರೆ ಈ ಬಾರಿ ನಡೆಯುವುದಿಲ್ಲ. ಕಳೆದ 45 ವರ್ಷಗಳಲ್ಲಿ ಕಾಣದ ಆರ್ಥಿಕ ಅವನತಿ ದೇಶದಲ್ಲಿ ಕಾಣುತ್ತಿದೆ. ರೈತರ ಪರಿಸ್ಥಿತಿ ಶೋಚನೀಯವಾಗಿದೆ. ಅಮೂಲ್ಯವಾದ ಸರ್ಕಾರಿ ಆಸ್ತಿಗಳನ್ನು ಖಾಸಗಿಯವರಿಗೆ ಪರಭಾರೆ ಮಾಡಲಾಗುತ್ತಿದೆ. ಧರ್ಮ–ಜಾತಿಯ ಹೆಸರಿನಲ್ಲಿ ದೇಶವನ್ನು ಒಡೆಯುವ ಕೆಲಸ ಆಗುತ್ತಿದೆ. ಕೆ.ಪ್ರತಾಪ್‌ಚಂದ್ರ ಶೆಟ್ಟಿಯವರ ನಾಯಕತ್ವದಲ್ಲಿ ವರಾಹಿ ನೀರು ತರುವುದು, ಪುರಸಭೆಯ ಅಭಿವೃದ್ಧಿಯೂ ಸೇರಿ ಕಾಂಗ್ರೆಸ್ ಅನೇಕ ಕೊಡುಗೆಗಳನ್ನು ನೀಡಿದೆ. ದೇಶದಲ್ಲಿ ನಡೆಯುವ ವಾಸ್ತಾವಿಕ ವಿಚಾರಗಳನ್ನು ಕಾರ್ಯಕರ್ತರ ಮೂಲಕ ಗ್ರಾಮದ ಪ್ರತಿ ಮತದಾರರಿಗೂ ಮುಟ್ಟಿಸುವ ಕೆಲಸ ಆಗಬೇಕು. ನಾವು ಅಭ್ಯರ್ಥಿಗಳನ್ನು ಆಯ್ಕೆ ಮಾಡುವುದನ್ನ ಮಾತ್ರ ಮಾಡುತ್ತೇವೆ. ಆದರೆ ಪ್ರತಿ ಪಕ್ಷದವರು ಅಭ್ಯರ್ಥಿಯನ್ನು ಕದಿಯುವುದರ ಜತೆಯಲ್ಲಿ ನಮ್ಮ ಅಭ್ಯರ್ಥಿಯನ್ನು ಹೇಗೆ ಸೋಲಿಸಬೇಕು ಎನ್ನುವ ಷಡ್ಯಂತ್ರವನ್ನು ಮಾಡುತ್ತಾರೆ. 23 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆ ನಡೆಸಿ ಅಲ್ಲಿನ ಸಮಸ್ಯೆಗೆ ಪರಿಹಾರ ನೀಡಲು ಆದ್ಯತೆ ನೀಡಬೇಕು ಎಂದರು.
Kshetra Samachara
10/12/2020 11:54 am