ಮಂಗಳೂರು: ಇತ್ತೀಚೆಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿ ಖಂಡಿಸಿ ಪಿಎಫ್ಐ ವತಿಯಿಂದ ನೂರಾರು ಸಂಖ್ಯೆಯ ಕಾರ್ಯಕರ್ತರು ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭ ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ. ಅಶ್ರಫ್ ಮಾತನಾಡಿ, ಜಾರಿ ನಿರ್ದೇಶನಾಲಯ ಸ್ವತಂತ್ರವಾಗಿ ಕಾರ್ಯಾಚರಿಸಬೇಕಿತ್ತು. ಆದರೆ, ED ಇಂದು ಅಮಿತ್ ಶಾ ಅವರ ಆಣತಿಯಂತೆ ಕಾರ್ಯಾಚರಿಸುತ್ತಿದೆ.
ಒಂದು ಕಡೆ ದೇಶಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಕೇಂದ್ರ ಸರಕಾರ ಅಧಿಕಾರದ ದುರುಪಯೋಗದಲ್ಲಿ ನಿರತವಾಗಿದೆ.
ನಾಯಕರ ಮನೆ ಮೇಲೆ ದಾಳಿ ನಡೆಸಿ ಬರಿಗೈಯ್ಯಲ್ಲಿ ವಾಪಸಾಗಿರೋದು ED ಸಂಸ್ಥೆಯ ವಿಶ್ವಾಸಾರ್ಹತೆಯನ್ನೇ ಕುಗ್ಗಿಸುವಂತೆ ಮಾಡಿದೆ.
ಇಂತಹ ದಾಳಿಗಳಿಗೆ ಬೆದರಿ ಪಿಎಫ್ಐ ಸಂಘಟನೆ ಕಟ್ಟಿಲ್ಲ ಎಂದರು. ಪ್ರತಿಭಟನಾ ಸಮಾವೇಶದಲ್ಲಿ ಪಿಎಫ್ಐ ರಾಜ್ಯಾಧ್ಯಕ್ಷ ಯಾಸಿರ್ ಹಸನ್, ಮುಸ್ಲಿಂ ಸಂಘಟನೆಗಳ ಒಕ್ಕೂಟ ಅಧ್ಯಕ್ಷ ಅಶ್ರಫ್, ಅನ್ವರ್ ಸಾದಾತ್ ಬಜತ್ತೂರು ಸಹಿತ ಹಲವು ಮುಖಂಡರು ಉಪಸ್ಥಿತರಿದ್ದರು.
ನೂರಾರು ಸಂಖ್ಯೆಯಲ್ಲಿದ್ದ ಕಾರ್ಯಕರ್ತರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತು ಮಾಡಲಾಗಿತ್ತು.
Kshetra Samachara
11/12/2020 12:13 pm