ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬನ್ನಂಜೆ ಗೋವಿಂದಾಚಾರ್ಯ ನಿಧನಕ್ಕೆ ಸಿಎಂ ಸಂತಾಪ

ಬೆಂಗಳೂರು: ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ಮಾಡಿರುವ ಸಿಎಂ, 'ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ ಸಾಹಿತಿ, ಕವಿ, ಪ್ರವಚನಕಾರ ಉಡುಪಿಯ ಡಾ. ಬನ್ನಂಜೆ ಗೋವಿಂದಾಚಾರ್ಯರು ವಿಧಿವಶರಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ವೇದ, ಪುರಾಣಗಳ ಕುರಿತ ಅವರ ಕೃತಿಗಳು, ಪ್ರವಚನಗಳು ಧಾರ್ಮಿಕ ಪ್ರಜ್ಞೆಯನ್ನು ಜಾಗೃತಗೊಳಿಸುವಂತಿದ್ದವು. ಅನೇಕ ಸಂಸ್ಕೃತ, ಕನ್ನಡ ಗ್ರಂಥಗಳನ್ನು ಅವರು ರಚಿಸಿದ್ದರು' ಎಂದು ಸಂತಾಪ ಸೂಚಿಸಿದ್ದಾರೆ.

'ಸಂಸ್ಕೃತ, ಕನ್ನಡ, ತುಳು ಭಾಷೆಗಳಲ್ಲಿ ಪಾರಂಗತರಾಗಿದ್ದ ಬನ್ನಂಜೆಯವರ ನಿಧನದಿಂದ ನಾಡು ಶ್ರೇಷ್ಠ ಜ್ಞಾನಿಗಳನ್ನು, ಸಾರಸ್ವತ ಲೋಕದ ಅಗಾಧ ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು, ಅವರ ಕುಟುಂಬದವರಿಗೆ ಮತ್ತು ಅಪಾರ ಅಭಿಮಾನಿಗಳಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ' ಎಂದು ಟ್ವೀಟ್ ಮಾಡಿದ್ದಾರೆ.

Edited By : Vijay Kumar
Kshetra Samachara

Kshetra Samachara

13/12/2020 02:38 pm

Cinque Terre

16.4 K

Cinque Terre

2

ಸಂಬಂಧಿತ ಸುದ್ದಿ