ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ವಸತಿ ಸಚಿವ ವಿ. ಸೋಮಣ್ಣ ಇಂದು ಭೇಟಿ ನೀಡಿ ದೇವರ ದರ್ಶನ ಪಡೆದರು.
ಬಳಿಕ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷ ದೀಪೋತ್ಸವದ ಪ್ರಯುಕ್ತ ಇಂದು ಸಂಜೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನದ ಉದ್ಘಾಟನೆಯನ್ನು ಸಚಿವರು ನೆರವೇರಿಸಲಿದ್ದಾರೆ.
Kshetra Samachara
13/12/2020 04:18 pm