ಮಂಗಳೂರು: ನೂತನ ಬ್ಯಾರಿ ಭವನಕ್ಕೆ ಪೆರ್ಮನ್ನೂರು ಗ್ರಾಮದ ತೊಕ್ಕೊಟ್ಟು ಬಸ್ ನಿಲ್ದಾಣದ ಬಳಿ 3 ಕೋಟಿ ಮೌಲ್ಯದ 0.25 ಎಕರೆ ಜಮೀನು ಬ್ಯಾರಿ ಭವನ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾಗಿದೆ. ಜನಪ್ರತಿನಿಧಿಗಳು ಹಾಗೂ ಬ್ಯಾರಿ ಭಾಷಿಕ ಪ್ರಮುಖರನ್ನು ಕರೆದು ಕಟ್ಟಡ ನಿರ್ಮಾಣಕ್ಕೆ ಶೀಘ್ರದಲ್ಲೇ ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕ್ಯಾಡೆಮಿ ಅಧ್ಯಕ್ಷ ರಹೀಮ್ ಉಚ್ಚಿಲ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ತೊಕ್ಕೊಟ್ಟು ಪ್ರದೇಶದಲ್ಲಿ ಹೆಚ್ಚಾಗಿ ಬ್ಯಾರಿ ಭಾಷಿಕರು ವಾಸವಿದ್ದಾರೆ. ಅದೇ ಪರಿಸರದಲ್ಲಿ ಬ್ಯಾರಿ ಭವನ ನಿರ್ಮಾಣಕ್ಕೆ ಸರ್ಕಾರ ನಿವೇಶನ ನೀಡಿದೆ. ಈ ಮೂಲಕ ಸರ್ವರಿಗೆ ಸಮಬಾಳು, ಸರ್ವರಿಗೆ ಸಮಪಾಲು ಎಂಬ ನೀತಿಯಂತೆ ಸರ್ಕಾರ ನಡೆದುಕೊಂಡಿದೆ. ಇದಕ್ಕಾಗಿ ಸಿಎಂ ಯಡಿಯೂರಪ್ಪ ಹಾಗೂ ಕರ್ನಾಟಕ ಸರ್ಕಾರಕ್ಕೆ ರಹೀಮ್ ಉಚ್ಚಿಲ ಅವರು ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದ್ದಾರೆ.
Kshetra Samachara
16/12/2020 08:56 am