ಉಡುಪಿ:ಕಾಂಗ್ರೆಸ್ ಮುಖಂಡರು ಸಭಾಪತಿ ಸ್ಥಾನವನ್ನು ಕಾಂಗ್ರೆಸ್ಸೀಕರಣ ಮಾಡಿದ್ದಾರೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಆರೋಪಿಸಿದ್ದಾರೆ.ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಸಚಿವರು, ಮೊನ್ನೆಯ ಗೊಂದಲಕ್ಕೆ ಕಾಂಗ್ರೆಸ್ ನೇರ ಕಾರಣ. ಸಭಾಪತಿ ಮೇಲೆ ಅವಿಶ್ವಾಸ ನಿರ್ಣಯ ಮಾಡಲಾಗಿತ್ತು.ಆದರೆ ಕಾಂಗ್ರೆಸ್ ನವರು ಸಭಾಪತಿ ಮೇಲೆ ಒತ್ತಡ ತಂದು ಗೊಂದಲ ನಿರ್ಮಾಣ ಮಾಡಿದ್ದಾರೆ.
ರಾಜಧರ್ಮ ಪಾಲನೆ ಮಾಡಬೇಕಾದ ಕಾಂಗ್ರೆಸ್ ಸಭಾಪತಿ ಕೈ ಕಟ್ಟಿಹಾಕಿದ್ದಾರೆ.
ಈ ಮೂಲಕ ಅವಿಶ್ವಾಸ ಗೊತ್ತುವಳಿ ಆಗದಂತೆ ಮಾಡಿದ್ದಾರೆ.ಈ ಸಂಬಂಧ ನಾವುರಾಜ್ಯಪಾಲರ ಮೊರೆ ಹೋಗಿದ್ದೇವೆ.ಅವಿಶ್ವಾಸ ಗೊತ್ತುವಳಿ ಚರ್ಚೆ ಹಾಗೂ ಮತದಾನಕ್ಕೆ ಕೇಳಲಾಗಿದೆ ಎಂದರು.ಬಿಜೆಪಿ ವರಿಷ್ಠರು ಸಭಾಪತಿ ಯಾರಾಗಬೇಕೆಂದು ತೀರ್ಮಾನಿಸುತ್ತಾರೆ ಎಂದ ಅವರು, ಸಭಾಪತಿಗೆ ನೀಡಲಾಗಿರುವ ಬೆಂಬಲ ಹಿಂಪಡೆದಿರುವ ಬಗ್ಗೆ ರಾಜ್ಯಪಾಲರಿಗೆ ನೀಡಿರುವ ಮನವಿಯಲ್ಲಿ ತಿಳಿಸಲಾಗಿದೆ.ಸಭಾಪತಿ ವಿಶ್ವಾಸಮತ ಕಳೆದುಕೊಂಡಿದ್ದಾರೆ ಎಂದು ಉಡುಪಿಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರತಿಕ್ರಿಯೆ ನೀಡಿದ್ದಾರೆ.
Kshetra Samachara
17/12/2020 11:28 am