ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಡಬ: ಜಿಲ್ಲಾಧಿಕಾರಿ ಕಡಬಕ್ಕೆ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಕಡಬ: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಕಡಬಕ್ಕೆ ಭೇಟಿ ನೀಡಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು.

ನೂತನ ಕಡಬ ತಾಲೂಕು ಘೋಷಣೆಯಾದ ಬಳಿಕ ಜಿಲ್ಲಾಧಿಕಾರಿಗಳ ಪ್ರಥಮ ಭೇಟಿ ಇದಾಗಿದೆ.

ನೂತನ ಕಡಬ ತಾಲೂಕು ಘೋಷಣೆಯಾದರೂ ಇಲ್ಲಿ ಯಾವುದೇ ಇಲಾಖೆಯ ಕಚೇರಿಗಳು ಕಾರ್ಯ ನಿರ್ವಹಿಸುತ್ತಿಲ್ಲ ಎನ್ನುವ ದೂರುಗಳು ಜಿಲ್ಲಾಧಿಕಾರಿಗಳಿಗೆ ಸಲ್ಲಿಕೆಯಾಗಿದೆ. ಮಾತ್ರವಲ್ಲದೆ, ಸರಕಾರಿ ಆಸ್ಪತ್ರೆಯ ದುಸ್ಥಿತಿ, ಪಟ್ಟಣ ಪಂಚಾಯತ್ ಅವ್ಯವಸ್ಥೆ, ಅಕ್ರಮ ಮರಳುಗಾರಿಕೆ, ಕಂದಾಯ ಇಲಾಖೆ, ತಾಲೂಕು ಕಚೇರಿಗಳಲ್ಲಿ ಕೆಲಸ ವಿಳಂಬ ಮತ್ತು ಮಧ್ಯವರ್ತಿಗಳ ಹಾವಳಿ, ಕಡಬದ ರಸ್ತೆ ಬದಿಯ ಮೀನು ಮಾರಾಟವು ಮಾರುಕಟ್ಟೆಗೆ ಸ್ಥಳಾಂತರವಾಗದ ಬಗ್ಗೆಯೂ ಹೆಚ್ಚಿನ ದೂರುಗಳನ್ನು ಸಾರ್ವಜನಿಕರು ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಚಂಪಾ ಷಷ್ಠಿ ಸಮಯದಲ್ಲಿ ಅಂತರ್ ಜಿಲ್ಲಾ ಮತ್ತು ಅಂತರ್ ರಾಜ್ಯ ಭಕ್ತರ ಪ್ರವೇಶಕ್ಕೆ ನಿರ್ಬಂಧ ವಿಧಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳು ಮಾಧ್ಯಮದ ಜೊತೆಗೆ ಮಾತನಾಡಿದರು.

ಸಾರ್ವಜನಿಕರ ಸಮಸ್ಯೆ ಮತ್ತು ದೂರು ಸ್ವೀಕರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ಕೆಲವು ಸಮಸ್ಯೆಗಳನ್ನು ಕೂಡಲೇ ಬಗೆಹರಿಸುವ ಮತ್ತು ಉನ್ನತ ಅಧಿಕಾರಿಗಳಿಗೆ ತಿಳಿಸಿ ಬಗೆಹರಿಸುವ ಸಮಸ್ಯೆಗಳನ್ನು ಅವರ ಗಮನಕ್ಕೆ ತಂದು ಪರಿಹಾರ ಕಲ್ಪಿಸುವ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

17/12/2020 04:00 pm

Cinque Terre

26.22 K

Cinque Terre

1

ಸಂಬಂಧಿತ ಸುದ್ದಿ