ಮೂಡುಬಿದಿರೆ: ಮತದಾರರ ಪಟ್ಟಿ ಸಿದ್ಧಪಡಿಸುವಲ್ಲಿ ಅಧಿಕಾರಿಗಳು ಎಡವಿದ್ದಾರೆ. ಹೊಸ ಮತದಾರರ ಪಟ್ಟಿ ಪಡೆಯಲು 9 ಸಾವಿರ ಶುಲ್ಕ ಕಟ್ಟಬೇಕು. ಇನ್ನು ಪರಿಷ್ಕøತ ಪಟ್ಟಿ ಪಡೆಯಲು ಅಷ್ಟೇ ಶುಲ್ಕ ಕಟ್ಟಬೇಕು. ಒಂದು ಚುನಾವಣೆ ವೇಳೆ ಕೆಲವು ಬಾರಿ ಮತದಾರರ ಪಟ್ಟಿಯನ್ನು ಪರಿಷ್ಕರಿಸುವುದರ ಹಿಂದಿನ ಉದ್ದೇಶ ಏನು ಎಂದು ಪ್ರಶ್ನಿಸಿದರು.
ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಚುನಾವಣೆ ಅಕ್ರಮ ಎಸಗುವ ಪ್ರಯತ್ನ ನಡೆಸುತ್ತಿದ್ದಾರೆ. ಆಡಳಿತ ಪಕ್ಷದ ಒತ್ತಡಕ್ಕೊಳಗಾಗಿ ಅಧಿಕಾರಿಗಳು ಕಾನೂನು ಉಲ್ಲಂಘಿಸಿದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಗುವುದು.
ಮೂಡುಶೆಡ್ಡೆ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಂಚಾಯಿತಿ ಮಾಜಿ ಅಧ್ಯಕ್ಷ, ಬಿಜೆಪಿ ಅಭ್ಯರ್ಥಿ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಕಾಂಗ್ರೆಸ್ ಅಭ್ಯರ್ಥಿಯ ನಾಮಪತ್ರವನ್ನು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕೀಯ ಒತ್ತಡಕ್ಕೊಳಗಾಗಿ ತಿರಸ್ಕರಿಸಿದ್ದಾರೆ.
ಚುನಾವಣಾಧಿಕಾರಿಯ ಎದುರೆ ಕಾಂಗ್ರೆಸ್ ಅಭ್ಯರ್ಥಿ ಸಹಿ ಹಾಕಿದ ನಾಮತ್ರವನ್ನು ಪರಿಶೀಲನೆ ವೇಳೆ ಸಹಿ ಹಾಕಿದ ಜಾಗ ಸರಿ ಇಲ್ಲ ಎಂದು ಅದೇ ಚುನಾವಣಾಧಿಕಾರಿ ತಿರಸ್ಕರಿಸಿದರ ಹಿಂದೆ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿಯ ಒತ್ತಡ ಕಾರಣ ಎಂದು ಆರೋಪಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಲೇರಿಯನ್ ಸಿಕ್ವೇರಾ ಉಪಸ್ಥಿತರಿದ್ದರು.
Kshetra Samachara
18/12/2020 05:58 pm