ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿ 2020 ನೇ ಸಾಲಿನ ಪಾರ್ತಿಸುಬ್ಬ, ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಯಕ್ಷ ಸಿರಿ ವಾರ್ಷಿಕ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ ಅಕಾಡೆಮಿ ಅಧ್ಯಕ್ಷ ಪ್ರೋ ಎಮ್ .ಎ ಹೆಗಡೆ ಈ ಬಗ್ಗೆ ಮಾಹಿತಿ ನೀಡಿದ್ರು ನಗರದ ಪ್ರೆಸ್ ಕ್ಲಬ್ ನಲ್ಲಿ ಮಾತನಾಡಿದ ಅವರು ಸರ್ಕಾರ ನಿಯಮಾನುಸಾರ ಒಬ್ಬ ಗಣ್ಯರನ್ನು ಪಾರ್ತಿಸುಬ್ಬ ಪ್ರಶಸ್ತಿಗೆ ಹಾಗೂ 5 ಮಂದಿಯನ್ನು ವಾರ್ಷಿಕ ಗೌರವ ಪ್ರಶಸ್ತಿ ಮತ್ತು 10 ಮಂದಿ ಗಣ್ಯರನ್ನು ಯಕ್ಷ ಸಿರಿ ಪ್ರಶಸ್ತಿಗೆ ಅಯ್ಕೆ ಮಾಡಲಾಗಿದೆ.ಹಿರಿಯ ಯಕ್ಷಗಾನ ಅರ್ಥಧಾರಿ ಹಾಗೂ ಪ್ರಸಂಗ ಕರ್ತೃಗಳಾದ ಶ್ರೀ ಡಿ.ಎಸ್.ಶ್ರೀಧರ್ ಅವರನ್ನು ‘ಪಾರ್ತಿಸುಬ್ಬ ಪ್ರಶಸ್ತಿ’ಗೆ ಆಯ್ಕೆ ಮಾಡಲಾಯಿತು.
ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರಿಗೆ ರೂ.1.00ಲಕ್ಷ ನಗದು, ಹಾಗೂ ಗೌರವ ಪ್ರಶಸ್ತಿ ಪುರಸ್ಕೃತರಿಗೆ ತಲಾ 50, 000ನಗದು
ಪ್ರಶಸ್ತಿ ಫಲಕ, ಪ್ರಮಾಣಪತ್ರ, ಹಾರ, ಶಾಲು ಪೇಟ ಹಾಗೂ ಫಲತಾಂಬೂಲಗಳನ್ನು ನೀಡಿ ಪುರಸ್ಕರಿಸಲಾಗುವುದು ಎಂದರು.
Kshetra Samachara
21/12/2020 05:03 pm