ಉಡುಪಿ: ಜಿಲ್ಲೆಯಲ್ಲಿ ಬಿಸಿಲಿನ ತಾಪದ ನಡುವೆಯೂ ಗ್ರಾಮ ಪಂಚಾಯತ್ ಚುನಾವಣೆ ಬಿರುಸಿನಿಂದ ಸಾಗಿದೆ.
ಬೆಳಿಗ್ಗೆ 9 ಗಂಟೆ ಹೊತ್ತಿಗೇ 14.37 ಶೇ. ಮತದಾನ ದಾಖಲಾಗಿದ್ದು, ಗ್ರಾಮೀಣ ಜನರು ಉತ್ಸಾಹದಿಂದಲೇ ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ಉಡುಪಿ, ಬ್ರಹ್ಮಾವರ, ಬೈಂದೂರು, ಹೆಬ್ರಿ ತಾಲೂಕಿನಲ್ಲಿ ಮತದಾನ ನಡೆಯುತ್ತಿದ್ದು, ಹನ್ನೊಂದು ಗಂಟೆ ಹೊತ್ತಿಗೆ 20% ಕ್ಕೂ ಹೆಚ್ಚು ಜನ ತಮ್ಮ ಮತ ಚಲಾಯಿಸಿದ್ದಾರೆ. ಎಲ್ಲೆಡೆ ಪೊಲೀಸರನ್ನು ನಿಯೋಜಿಸಲಾಗಿದ್ದು, ಮತದಾನ ಶಾಂತಿಯುತವಾಗಿ ನಡೆಯುತ್ತಿದೆ.
Kshetra Samachara
22/12/2020 11:44 am