ಮಂಗಳೂರು : ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ
ಮಂಗಳೂರಿನಲ್ಲಿ ಮಾತನಾಡಿದ ನಳೀನ್ ಕುಮಾರ್ ಕಟೀಲ್ ಬಿಜೆಪಿ ಸರಕಾರಕ್ಕೆ ಸಂಪೂರ್ಣ ಬಹುಮತ ಇದೆ.
ಈಗ ಯಾವುದೇ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಅಗತ್ಯವಿಲ್ಲ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಾಗಲೀ, ಜೆಡಿಎಸ್ ಪಕ್ಷವನ್ನು ಎನ್ ಡಿಎ ಮೈತ್ರಿಕೂಟಕ್ಕೆ ತರುವ ವಿಚಾರವಾಗಲೀ ಬಿಜೆಪಿಯಲ್ಲಿ ನಡೆದಿಲ್ಲ, ಜೆಡಿಎಸ್ ಪ್ರತ್ಯೇಕವಾದ ಪಕ್ಷ, ಅವರ ಕೆಲಸವನ್ನು
ಅವರು ಮಾಡುತ್ತಿದ್ದಾರೆ. ನಮ್ಮ ಕೆಲಸವನ್ನು ನಾವು ಮಾಡಲಿದ್ದೇವೆ .ಈಮೂಲಕ ಬಿಜೆಪಿ- ಜೆಡಿಎಸ್ ನಡುವಿನ ಮೈತ್ರಿ ವಿಚಾರ ಸಂಪೂರ್ಣ ಆಧಾರರಹಿತ. ಬಿಜೆಪಿ ಪರವಾಗಿ ಯಾರು ಕೂಡ ಅಧಿಕೃತವಾಗಿ ಈ ಬಗ್ಗೆ ಹೇಳಿಕೆ ನೀಡಿಲ್ಲ ಎಂದರು.
Kshetra Samachara
23/12/2020 09:03 pm