ಕಾಪು: ಗ್ರಾಪಂ ಚುನಾವಣೆ ಪಕ್ಷ ಮತ್ತು ಪಕ್ಷದ ಚಿಹ್ನೆ ರಹಿತವಾಗಿ ನಡೆಯುತ್ತಿದ್ದರೂ, ಬಿಜೆಪಿ ಕೆಲವೆಡೆ ಅಧಿಕಾರಿಗಳನ್ನು ಉಪಯೋಗಿಸಿಕೊಂಡು ಚುನಾವಣಾ ಅಕ್ರಮಕ್ಕೆ ಅವಕಾಶ ಮಾಡಿಕೊಡುತ್ತಿದೆ. ಆಡಳಿತ ಪಕ್ಷ ಮತ್ತು ಅಧಿಕಾರಿಗಳ ಬೇಜವಾಬ್ದಾರಿಯ ಬಗ್ಗೆ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದ್ದು, ಅವಶ್ಯಕತೆ ಬಿದ್ದರೆ ನ್ಯಾಯಾಲಯಕ್ಕೂ ಹೋಗುತ್ತೇವೆ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಹೇಳಿದರು.
ಕಾಪು ಪ್ರೆಸ್ ಕ್ಲಬ್ ನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಪು ವಿಧಾನಸಭಾ ಕ್ಷೇತ್ರದ 10 ಗ್ರಾಮ ಪಂಚಾಯತ್‌ಗಳಿಗೆ ನಡೆದಿರುವ ಚುನಾವಣೆಯ ವೇಳೆ ಬೊಮ್ಮರಬೆಟ್ಟು ಮತ್ತು ಉದ್ಯಾವರದಲ್ಲಿ ಚುನಾವಣಾ ಅಕ್ರಮಗಳು ನಡೆದಿರುವ ಬಗ್ಗೆ ಮಾಹಿತಿಯಿದೆ. ಈ ಬಗ್ಗೆ ಉಡುಪಿ ಜಿಲ್ಲಾಡಳಿತ, ತಾಲೂಕು ಆಡಳಿತ ಮತ್ತು ಚುನಾವಣಾ ವಿಭಾಗಕ್ಕೆ ದೂರು ನೀಡಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಚುನಾವಣಾ ಆಯೋಗಕ್ಕೆ ಕೂಡ ದೂರು ನೀಡಲಾಗಿದೆ ಎಂದರು.
ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್‌ಚಂದ್ರ ಸುವರ್ಣ, ಕಾಂಗ್ರೆಸ್ ಉಸ್ತುವಾರಿ ಅಣ್ಣಯ್ಯ ಶೇರಿಗಾರ್, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್‌ಚಂದ್ರ ಜೆ. ಶೆಟ್ಟಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಯುವ ಕಾಂಗ್ರೆಸ್ ಉಸ್ತುವಾರಿ ಅಖಿಲೇಶ್ ಕೋಟ್ಯಾನ್, ಉಡುಪಿ ಜಿ.ಪಂ. ಸದಸ್ಯ ವಿಲ್ಸನ್ ರೋಡ್ರಿಗಸ್, ತಾ.ಪಂ. ಉಪಾಧ್ಯಕ್ಷ ಯು.ಸಿ. ಶೇಖಬ್ಬ ಮೊದಲಾದವರು ಉಪಸ್ಥಿತರಿದ್ದರು.
Kshetra Samachara
25/12/2020 04:52 pm