ಮಂಗಳೂರು: ಕೈಗಾರಿಕೆಗಳ ಅಭಿವೃದ್ಧಿ ಮಾಡುವ ಉದ್ದೇಶದಿಂದ ರಾಜ್ಯದಲ್ಲಿ 50 ಸಾವಿರ ಎಕರೆ ಭೂಮಿಯ ಬಳಕೆಗೆ ಲ್ಯಾಂಡ್ ಬ್ಯಾಂಕ್ ಯೋಜನೆಯನ್ನು ಕೈಗೊಳ್ಳಲಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್. ನಿರಾಣಿ ತಿಳಿಸಿದರು.
ನಗರದ ಟಿಎಂಎ ಪೈ ಸಭಾಂಗಣದಲ್ಲಿ ನಡೆದ 'ಉದ್ಯಮಿಯಾಗು ಉದ್ಯೋಗ ನೀಡು' ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಈ ಲ್ಯಾಂಡ್ ಬ್ಯಾಂಕ್ ಯೋಜನೆಗಾಗಿ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲೂ ಲಭ್ಯವಿರುವ ಭೂಮಿಯನ್ನು ಸ್ವಾಧೀನಪಡಿಸಲಾಗುತ್ತದೆ ಎಂದು ನಿರಾಣಿ ತಿಳಿಸಿದರು.
ರಾಜ್ಯದಲ್ಲಿ ಹೆದ್ದಾರಿ, ಬಂದರು, ಏರ್ಪೋಟ್ ಸೇರಿದಂತೆ ಕೈಗಾರಿಕೆಗಳ ಬೆಳವಣಿಗೆಗೆ ಪೂರಕವಾದ ಮೂಲ ಸೌಕರ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಯೋಜನೆಯನ್ನು ಕೈಗೊಂಡಿದೆ. ಕರಾವಳಿಯಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅವಕಾಶವಿರುವಂತೆ ಉದ್ಯಮಿಗಳಿಗೂ ಅಷ್ಟೇ ಉತ್ತಮ ಅವಕಾಶವಿದೆ ಎಂದು ಡಾ.ಮುರುಗೇಶ ಆರ್. ನಿರಾಣಿ ಹೇಳಿದರು.
Kshetra Samachara
12/05/2022 10:08 pm