ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವ್ಯಾಪಾರ ಬಹಿಷ್ಕಾರ: ಪೇಜಾವರ ಶ್ರೀಗಳನ್ನು ಭೇಟಿ ಮಾಡಿದ ಮುಸಲ್ಮಾನ ವರ್ತಕರು

ವರದಿ: ರಹೀಂ ಉಜಿರೆ

ಉಡುಪಿ: ಉಡುಪಿಯಲ್ಲಿ ಮುಸಲ್ಮಾನ ವ್ಯಾಪಾರಿಗಳಿಗೆ ವ್ಯಾಪಾರ ಬಹಿಷ್ಕಾರ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ಇವತ್ತು ಪೇಜಾವರ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಯನ್ನು ಭೇಟಿ ಮಾಡಿದ ಮುಸಲ್ಮಾನ ವರ್ತಕರು ಬಹಿಷ್ಕಾರ ತೆರವುಗೊಳಿಸಲು ಸಹಕರಿಸುವಂತೆ ಮನವಿ ಮಾಡಿದರು. ಪೇಜಾವರ ಮಠದ ಶ್ರೀ ರಾಮ ವಿಠಲ ಸಭಾಭವನದಲ್ಲಿ ಭೇಟಿ ಮಾಡಿದ ಮುಸಲ್ಮಾನ ವರ್ತಕರು ಮತ್ತು ಮುಖಂಡರು ,ಜಾತ್ರೆ ವ್ಯಾಪಾರ ಮಾಡಲು ಅವಕಾಶ ನೀಡುವಂತೆ ಮನವಿ ಮಾಡಿಕೊಂಡರು.ವ್ಯಾಪಾರ ಬಹಿಷ್ಕಾರದಿಂದಾಗಿ ಬೀದಿಬದಿ ಜಾತ್ರೆ ವ್ಯಾಪಾರಿಗಳಿಗೆ ಸಮಸ್ಯೆಯಾಗಿದೆ. ದೇವಸ್ಥಾನಗಳಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಉಡುಪಿ ಜಿಲ್ಲಾ ಸೌಹಾರ್ದ ಸಮಿತಿಯ ಅಬೂಬಕ್ಕರ್ ಆತ್ರಾಡಿ ನೇತೃತ್ವದ ಮುಸಲ್ಮಾನ ವ್ಯಾಪಾರಿಗಳು ಮನವಿ ಸಲ್ಲಿಸಿದರು. ಮನವಿಗೆ ಶ್ರೀಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

Edited By : Manjunath H D
PublicNext

PublicNext

30/03/2022 04:38 pm

Cinque Terre

42.54 K

Cinque Terre

15

ಸಂಬಂಧಿತ ಸುದ್ದಿ