ಕಾಪು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮನೆ ಮೇಲೆ ಸಿಬಿಐ ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವರು ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಹೇರಿದ್ದಾರೆ.
ಈಗಾಗಲೇ ಅವರ ಕೇಸ್ ನ್ಯಾಯಾಲಯದಲ್ಲಿದೆ. ನ್ಯಾಯಾಲಯದಲ್ಲಿ ಕೇಸ್ ನಡೆಯುತ್ತಿರುವಾಗ ಮತ್ತೆ ಸಿಬಿಐ ದಾಳಿ ನಡೆಸಿದ್ದು ಖಂಡನೀಯ. ಇದು ವಿರೋಧ ಪಕ್ಷದ ಬಾಯಿ ಮುಚ್ಚಿಸುವ ಕೆಲಸ ಎಂದು ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಪ್ರತಿಕ್ರಿಯೆ ನೀಡಿದ್ದಾರೆ.
ಮುಂಬರುವ ಚುನಾವಣೆಗೆ ಪ್ರತಿಪಕ್ಷಗಳು ಸಜ್ಜಾಗುತ್ತಿರುವ ಹೊತ್ತಿಗೆ ಅವರ ಬಾಯಿ ಮುಚ್ಚಿಸಲು ಸಿಬಿಐ ದಾಳಿಯಾಗಿದೆ. ಈಗಾಗಲೇ ಅವರ ಮೇಲೆ ಐಟಿ,ಇಡಿ ದಾಳಿ ನಡೆಸಿದ ಪ್ರಕರಣ ನ್ಯಾಯಾಲಯದಲ್ಲಿದೆ.
ದಯವಿಟ್ಟು ಕೇಂದ್ರ ಸರಕಾರ ನ್ಯಾಯಾಲಯದಲ್ಲಿರುವ ಪ್ರಕರಣ ಇತ್ಯರ್ಥವಾಗುವ ತನಕ ಇಂತಹ ಕ್ರಮಕ್ಕೆ ಮುಂದಾಗಬಾರದು ಎಂದು ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
Kshetra Samachara
05/10/2020 09:26 pm