ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧರ್ಮಸ್ಥಳ: "ಒಮಿಕ್ರಾನ್ ನಿರ್ಮೂಲನೆಗೆ ಶ್ರೀ ಮಂಜುನಾಥನಲ್ಲಿ ಪ್ರಾರ್ಥನೆ"

ಬೆಳ್ತಂಗಡಿ: ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಭಾಗವಹಿಸಿದ್ದು ನನ್ನ ಯೋಗ. ನಾಡ ಜನರಿಗೆ ಉತ್ತಮ ಆರೋಗ್ಯ ಹಾಗೂ 'ಒಮಿಕ್ರಾನ್' ನಿಂದ ಮುಕ್ತಿ ಸಿಗಲಿ ಎಂದು ಶ್ರೀಮಂಜುನಾಥ ಸ್ವಾಮಿಯಲ್ಲಿ ಪ್ರಾರ್ಥಿಸಿದ್ದೇನೆ ಎಂದು ಸಚಿವ ಡಾ.ಕೆ. ಸುಧಾಕರ್ ಹೇಳಿದರು.

ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಪ್ರಯುಕ್ತ ನಡೆದ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.

"ಕೊರೊನಾ 3ನೇ ಅಲೆ ನಿಗ್ರಹದ ಬಗ್ಗೆ ಅನೇಕ ಸಭೆಗಳನ್ನು ಬೆಂಗಳೂರಿನಲ್ಲಿ ಮುಗಿಸಿ ಮುಖ್ಯಮಂತ್ರಿಗಳ ಅನುಮತಿ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದಿದ್ದೇನೆ. ಈಗಾಗಲೇ ಬೆಂಗಳೂರಿನಲ್ಲಿ ಎಲ್ಲ ವೈದ್ಯಕೀಯ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಹಿರಿಯ ಅಧಿಕಾರಿಗಳು, ವೈದ್ಯರ ಸಭೆ ನಡೆಸಿ, ಒಮಿಕ್ರಾನ್ ಸಿದ್ಧತೆ ಬಗ್ಗೆ ವೀಡಿಯೊ ಸಂವಾದ ನಡೆಸಲಾಗಿದೆ. ನಂತರ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 'ಒಮಿಕ್ರಾನ್' ಹರಡದಂತೆ ಯಾವ ರೀತಿಯಲ್ಲಿ ಕ್ರಮ ಕೈಗೊಳ್ಳಬಹುದು ಎಂಬುದರ ಬಗ್ಗೆ ವಿಸ್ತೃತ ಚರ್ಚೆ" ನಡೆಸಲಾಗಿದೆ ಎಂದರು.

Edited By : Shivu K
Kshetra Samachara

Kshetra Samachara

04/12/2021 10:16 am

Cinque Terre

9.37 K

Cinque Terre

2

ಸಂಬಂಧಿತ ಸುದ್ದಿ