ಮಂಗಳೂರು: ಭಾರೀ ಸುದ್ದಿಯಲ್ಲಿರುವ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ ನೋಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಟ್ವೀಟ್ ಮಾಡಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
'ದಿ ಕಾಶ್ಮೀರ್ ಫೈಲ್ಸ್' ಸಿನಿಮಾಗೆ ಶೇ.100 ತೆರಿಗೆ ವಿನಾಯಿತಿ ಘೋಷಣೆ ಮಾಡಿರುವ ಬೆನ್ನಲ್ಲೇ ಸಿನಿಮಾವನ್ನು ಬೆಂಬಲಿಸಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಟ್ವೀಟ್ ಮಾಡಿದ್ದಾರೆ. ಕಾಶ್ಮೀರದಲ್ಲಿ ಹಿಂದೂ ಪಂಡಿತರ ಮೇಲಾಗಿರುವ ದೌರ್ಜನ್ಯ, ಅತ್ಯಾಚಾರ, ಕ್ರೂರತೆ, ನರಮೇಧದ ಇತಿಹಾಸವನ್ನು ಅರಿಯುವ ಪ್ರಯತ್ನವೇ 'ದಿ ಕಾಶ್ಮೀರ್ ಫೈಲ್ಸ್' ಸಿನಿಮಾ.
ಈ ಸಿನಿಮಾವನ್ನು ಪ್ರತಿಯೊಬ್ಬ ದೇಶಾಭಿಮಾನಿಯೂ ನೋಡಬೇಕು. ಸತ್ಯ ಒಂದಲ್ಲ ಒಂದು ದಿನ ಹೊರಗೆ ಬರಲೇಬೇಕು ಎಂದು ಸಾಬೀತಾಗಿದೆ. ಇತಿಹಾಸ ಗೊತ್ತಿಲ್ಲದವರು ಇತಿಹಾಸ ಸೃಷ್ಟಿಸಲಾರರು ಎಂದು 'ದಿ ಕಾಶ್ಮೀರ್ ಫೈಲ್ಸ್' ಹ್ಯಾಷ್ ಟ್ಯಾಗ್ ಮೂಲಕ ಟ್ವೀಟ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
Kshetra Samachara
14/03/2022 09:12 pm