ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೊರೋನಾ ಕಾಲದಲ್ಲೂ ಹೆಬ್ರಿ ಪಿಡಿಓ ಜನರಿಗೆ ಕಂಟಕ!

ಹೆಬ್ರಿ: ಕೊರೋನಾ ಸಂಕಷ್ಟ ಕಾಲದಲ್ಲೂ ಗ್ರಾಮಸ್ಥರಿಗೆ ಕಂಟಕಪ್ರಾಯನಾಗಿರುವ ಹೆಬ್ರಿ ಪಂಚಾಯತ್ ಅಭಿವೃದ್ದಿ ಅಧಿಕಾರಿಯನ್ನು ಸೇವೆಯಿಂದ ವಜಾ ಮಾಡುವಂತೆ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವರಂಗ ,ಮುದ್ರಾಡಿ ಮತ್ತು ಹೆಬ್ರಿ ಗ್ರಾಮ ಪಂಚಾಯತ್‌ನಲ್ಲಿ ಪಿಡಿಓ ಆಗಿ ಕಳೆದ ಕೆಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸದಾಶಿವ ಸೇರ್ವೆಗಾರ್‌ ಕೋವಿಡ್‌ ಕಾಲದಲ್ಲೂ ಜನರಿಗೆ ತೊಂದರೆ ನೀಡುತ್ತಿದ್ದಾರೆ. ಹೆಬ್ರಿ ಗ್ರಾಮ ಪಂಚಾಯತ್‌ ನಲ್ಲಿ ಯಾವುದೇ ಸಾರ್ವಜನಿಕರ ಅಭಿಪ್ರಾಯ ಪಡೆಯದೆ 30 ಶೇಕಡಾ ತೆರಿಗೆ ಹೆಚ್ಚಿಸುತ್ತಿದ್ದಾರೆ. ಆಡಳಿತಾಧಿಕಾರಿ ನೇಮಕಗೊಂಡ ಮೇಲೆ ಮೇಲಧಿಕಾರಿಯವರ ಗಮನಕ್ಕೂ ತರದೆ ಪಂಚಾಯತ್‌ ನಲ್ಲಿ ಐಷಾರಾಮಿ ಕಛೇರಿ ಕಟ್ಟಡವನ್ನು ನಿರ್ಮಿಸಿ ಸಾರ್ವಜನಿಕರ ತೆರಿಗೆ ಹಣವನ್ನು ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.

ಅಧಿಕಾರಿಗಳು ಮತ್ತು ಶಾಸಕರ ಏಜೆಂಟ್‌ ಆಗಿ ಕೆಲಸ ಮಾಡುತ್ತಿರುವ ಪಿಡಿಒ ವಿರುದ್ಧ ಸಮಗ್ರ ತನಿಖೆ ನಡೆಸುವಂತೆ ಮುಖ್ಯಮಂತ್ರಿಗಳು ಮತ್ತು ಪಂಚಾಯತ್‌ ರಾಜ್‌ ಸಚಿವರಲ್ಲಿ

ಮಂಜುನಾಥ್ ಪೂಜಾರಿ ಆಗ್ರಹಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ, ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಸಂತೋಷ ಕುಮಾರ್‌ ಶೆಟ್ಟಿ, ಪಂಚಾಯಿತಿ ಸದಸ್ಯ ಕರುಣಾಕರ ಸೇರಿಗಾರ್‌, ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಂಜನಿ ಹೆಬ್ಬಾರ್‌ ಕಬ್ಬಿನಾಲೆ, ಶಶಿಕಲಾ ಪೂಜಾರಿ ಮುದ್ರಾಡಿ, ವಿಶುಕುಮಾರ್‌ ಮುದ್ರಾಡಿ,ಕೃಷ್ಣ ಆಚಾರ್ ಮತ್ತಿತರರು ಉಪಸ್ಥಿತರಿದ್ದರು.

Edited By : Shivu K
Kshetra Samachara

Kshetra Samachara

03/08/2021 02:07 pm

Cinque Terre

21.96 K

Cinque Terre

2

ಸಂಬಂಧಿತ ಸುದ್ದಿ