ಉಡುಪಿ: ಬೆಂಗಳೂರಿನಲ್ಲಿ ನಿನ್ನೆ (ಸೋಮವಾರ) ರೈತ ನಾಯಕ ರಾಕೇಶ್ ಟಿಕಾಯತ್ ಮೇಲೆ ಮಸಿ ಬಳಿದು ಹಲ್ಲೆ ನಡೆಸಿದ್ದನ್ನು ಖಂಡಿಸಿ ಇವತ್ತು ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.
ಉಡುಪಿಯ ಸಹಬಾಳ್ವೆ ಸಂಘಟನೆ ಮತ್ತು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ನಗರದ ಅಜ್ಜರಕಾಡಿನ ಹುತಾತ್ಮ ಸೈನಿಕ ಸ್ಮಾರಕದ ಎದುರು ನೆರೆದ ಪ್ರತಿಭಟನಕಾರರು, ನಿನ್ನೆ ನಡೆದ ಹಲ್ಲೆ ಮತ್ತು ಮಸಿ ಬಳಿದ ಪ್ರಕರಣವನ್ನು ಖಂಡಿಸಿದರು. ವಿಚಾರಗಳನ್ನು ವಿಚಾರಗಳ ಮೂಲಕ ಎದುರಿಸಲಾಗದ ಹೇಡಿಗಳು ಈ ಕೃತ್ಯ ಎಸಗಿದ್ದಾರೆ.
ರಾಕೇಶ್ ಟಿಕಾಯತ್ ಅವರು ಕೇಂದ್ರದ ಕೃಷಿ ಮಸೂದೆಗಳ ವಿರುದ್ಧ ಜನಾಭಿಪ್ರಾಯ ರೂಪಿಸಿ ಆ ಮಸೂದೆ ವಾಪಸ್ ಪಡೆಯುವಂತೆ ಮಾಡಿದ್ದರು. ರಾಜ್ಯ ರೈತ ಸಂಘ ಕೂಡ ಅವರಿಗೆ ಬೆಂಬಲ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ರಾಕೇಶ್ ಟಿಕಾಯತ್ ಅವರು ರಾಜ್ಯದ ರೈತ ಸಂಘಟನೆಗಳೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ಇದನ್ನು ಸಹಿಸಿಕೊಳ್ಳಲಾಗದ ಹೇಡಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ. ಇದು ಖಂಡನಾರ್ಹ. ತಕ್ಷಣ ಈ ಘಟನೆಗೆ ಕಾರಣರಾದವರನ್ನು ಸರ್ಕಾರ ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಮುಖಂಡರು ಒತ್ತಾಯಿಸಿದರು.
Kshetra Samachara
31/05/2022 09:36 pm