ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹತ್ಯೆಯಾದ ಹರ್ಷ ಕುಟುಂಬಕ್ಕೆ ಶಾಸಕ ವೇದವ್ಯಾಸ ಕಾಮತ್ 2 ಲಕ್ಷ ರೂ. ನೆರವು ಘೋಷಣೆ

ಮಂಗಳೂರು: ದುಷ್ಕರ್ಮಿಗಳಿಂದ ಕೊಲೆಯಾದ ಶಿವಮೊಗ್ಗ ಬಜರಂಗದಳದ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರು 2 ಲಕ್ಷ ರೂ. ನೆರವು ಘೋಷಣೆ ಮಾಡಿದ್ದಾರೆ.

ವೇದವ್ಯಾಸ ಕಾಮತ್ ಅವರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಘೋಷಣೆ ಮಾಡಿ ಪೋಸ್ಟ್ ಮಾಡಿದ್ದಾರೆ‌. ಜೊತೆಗೆ ಹಿಂದೂ ಕಾರ್ಯಕರ್ತ ಹರ್ಷ ಅವರ ಕೊಲೆ ಹಿಂದೂ ಸಮಾಜಕ್ಕಾಗಿರುವ ನಷ್ಟ. ಈ ದುಃಖವನ್ನು ಭರಿಸುವ ಶಕ್ತಿ ಅವರ ಕುಟುಂಬ ಸದಸ್ಯರಿಗೆ ದೊರಕಲೆಂದು ದೇವರಲ್ಲಿ ‌ಪ್ರಾರ್ಥಿಸುವೆ ಎಂದು ಶಾಸಕ ವೇದವ್ಯಾಸ ಕಾಮತ್ ಪೋಸ್ಟ್ ಮಾಡಿಕೊಂಡಿದ್ದಾರೆ.

Edited By : Nirmala Aralikatti
Kshetra Samachara

Kshetra Samachara

22/02/2022 08:42 pm

Cinque Terre

12.73 K

Cinque Terre

4