ಮಂಗಳೂರು: ನಗರದ ಬೈಕಂಪಾಡಿ ಜಂಕ್ಷನ್ ಹಾಗೂ ಹಳೆಯಂಗಡಿ ಪೇಟೆಯಲ್ಲಿ ಅಳವಡಿಸಿರುವ ನಾಥೂರಾಮ್ ಗೋಡ್ಸೆ ಮತ್ತು ಸಾವರ್ಕರ್ ಭಾವಚಿತ್ರ ಇರುವ ಬೃಹತ್ ಬ್ಯಾನರ್ ಅನ್ನು ಪೊಲೀಸರು ತೆರವುಗೊಳಿಸಿದ್ದಾರೆ.
ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯಾಧ್ಯಕ್ಷ ರಾಜೇಶ್ ಪವಿತ್ರನ್ ಅವರು ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಬೈಕಂಪಾಡಿ ಜಂಕ್ಷನ್ ನಲ್ಲಿ ಶುಭಾಶಯ ಕೋರಿ ಬ್ಯಾನರ್ ಅವಳಡಿಸಿದ್ದರು. ಈ ಬ್ಯಾನರ್ ನಲ್ಲಿ ನಾಥೂರಾಂ ಗೋಡ್ಸೆ ಹಾಗೂ ವೀರ ಸಾವರ್ಕರ್ ಫೋಟೋ ಅಳವಡಿಸಲಾಗಿತ್ತು. ಅಲ್ಲದೆ ರಾಜಕೀಯವನ್ನು ಹಿಂದುತ್ವಗೊಳಿಸಿ ಹಿಂದೂಗಳನ್ನು ಸೈನಿಕೀಕರಣಗೊಳಿಸಿ ಎಂಬ ಬರಹವನ್ನು ಬರೆಯಲಾಗಿತ್ತು. ಈ ಬಗ ಕೆಲ ಕಾಂಗ್ರೆಸ್ ಮತ್ತು ಎಸ್ ಡಿಪಿಐ ಮುಖಂಡರು ಹಾಗೂ ಸಾರ್ವಜನಿಕರು ಪೊಲೀಸ್ ಠಾಣೆಗಳಿಗೆ ಕರೆ ಮಾಡಿ ವಿಚಾರಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಮಾಧ್ಯಮಗಳೂ ಈ ಬಗ್ಗೆ ವರದಿ ಮಾಡಿತ್ತು.
ತಕ್ಷಣ ಎಚ್ಚೆತ್ತ ಪೊಲೀಸರು ಎರಡೂ ಕಡೆಗಳಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
PublicNext
18/08/2022 11:11 pm