ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣ, ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ಮಾತನಾಡಿದ್ದೇನೆ: ಸಿಎಂ ಬೊಮ್ಮಾಯಿ

ಮಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರುಗಳಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರ ಗಮನಕ್ಕೆ ಬಂದಿದ್ದು, ಉನ್ನತ ಪೊಲೀಸ್ ಅಧಿಕಾರಿಗಳ ಜೊತೆ ‌ಮಾತನಾಡಿದ್ದೇನೆ.

ರಾತ್ರಿಯೇ ಹಿರಿಯ ಪೊಲೀಸ್ ಅಧಿಕಾರಿಗಳು ಅವರ ಮನೆಗೆ ಭೇಟಿ ನೀಡಿದ್ದಾರೆ. ಈಗಾಗಲೇ ಕೃತ್ಯ ಎಸಗಿದವರ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಶೀಘ್ರದಲ್ಲೇ ಆರೋಪಿಗಳ ಬಂಧನವಾಗುತ್ತೆ, ಕಠಿಣ ಕ್ರಮ ಕೈಗೊಳ್ತೇವೆ ಎಂದ ಅವರು ಈಗಾಗಲೇ ಶಾಸಕ ಸತೀಶ್ ರೆಡ್ಡಿ ಜೊತೆಗೂ ನಾನು ಮಾತನಾಡಿದ್ದೇನೆ ಅಂದರು.

Edited By : Manjunath H D
Kshetra Samachara

Kshetra Samachara

12/08/2021 01:16 pm

Cinque Terre

13.9 K

Cinque Terre

0

ಸಂಬಂಧಿತ ಸುದ್ದಿ