ಉಡುಪಿ: ಮನನೊಂದ ಬಿಜೆಪಿ ಸ್ಥಳೀಯ ನಾಯಕಿಯೊಬ್ಬರು ತಮ್ಮ ವಾಸದ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿಯ ಕುಕ್ಕಿಕಟ್ಟೆಯಲ್ಲಿ ಇಂದು ನಡೆದಿದೆ. ಮೃತ ಮಹಿಳೆಯನ್ನು ಆಶಾ ಶೆಟ್ಟಿ (48) ಎಂದು ಗುರುತಿಸಲಾಗಿದೆ.
ಇವರು ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಕಾರ್ಯಕಾರಿಣಿ ಸದಸ್ಯೆ, ಹಾಗೂ ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗ ಇವುಗಳಲ್ಲಿ ಸಕ್ರಿಯರಾಗಿದ್ದರೆಂದು ತಿಳಿದುಬಂದಿದೆ. ಮೃತರ ಬಳಿ ಮರಣಪತ್ರ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳನ್ನು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.ಹೀಗಾಗಿ ಶವವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಉಚಿತ ಅಂಬುಲೆನ್ಸ್ ಸೇವೆ ಒದಗಿಸಿ ಇಲಾಖೆಗೆ ಸಹಕರಿಸಿದರು. ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೊರ್ಚಾದ ಅಧ್ಯಕ್ಷೆ ವೀಣಾ ಎಸ್ ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ, ಹಾಗೂ ಮಲಬಾರ್ ಗೋಲ್ಡ್ ಆಭರಣ ಮಳಿಗೆಯ ಗ್ರಾಹಕ ಸಂಪರ್ಕ ಅಧಿಕಾರಿ ಹಫೀಜ್ ರೆಹಮಾನ್ ಮತ್ತಿತರರು ಆಗಮಿಸಿದ್ದಾರೆ.
Kshetra Samachara
14/09/2021 10:14 pm