ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಸಿಎಂಗೆ ವಿರುದ್ಧ ವಿವಾದಾತ್ಮಕ ಹೇಳಿಕೆ ಆರೋಪ: ಹಿಂದೂ ಮಹಾಸಭಾದ ಮೂವರು ಮುಖಂಡರು ಅರೆಸ್ಟ್

ಮಂಗಳೂರು: ಸುದ್ದಿಗೋಷ್ಠಿಯಲ್ಲಿ ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ಬೆದರಿಕೆ ಒಡ್ಡಿರುವ ಆರೋಪದ ಹಿನ್ನೆಲೆಯಲ್ಲಿ ಅಖಿಲ ಭಾರತ ಹಿಂದೂ ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಧರ್ಮೇಂದ್ರ ಅವರ ಜೊತೆಗೆ ರಾಜೇಶ್ ಪವಿತ್ರನ್ ಹಾಗೂ ಪ್ರೇಮ್ ಪೊಳಲಿಯನ್ನು ಬರ್ಕೆ ಪೊಲೀಸರು ಬಂಧಿಸಿದ್ದಾರೆ.

ನಿನ್ನೆ ಖಾಸಗಿ ಹೊಟೇಲೊಂದರಲ್ಲಿ‌ ನಂಜನಗೂಡಿನಲ್ಲಿರುವ ದೇಗುಲ ಕೆಡವಿರುವ ಹಿನ್ನೆಲೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಧರ್ಮೇಂದ್ರ ಅವರು, "ಗಾಂಧೀಜಿಯವರನ್ನು ಹತ್ಯೆ ಮಾಡಲು ಸಾಧ್ಯವಾಗುತ್ತದೆ ಎಂದ ಮೇಲೆ‌ ನಿಮ್ಮ ವಿಚಾರದಲ್ಲಿ ಸಾಧ್ಯವಿಲ್ಲ ಅಂತೀರಾ?" ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಲೋಹಿತ್ ಕುಮಾರ್ ಸುವರ್ಣ ಅವರು ಬರ್ಕೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು‌.

ಅದರ ಬೆನ್ನಿಗೇ ಧರ್ಮೇಂದ್ರ ಅವರು ವೀಡಿಯೋ ಮಾಡಿ ಕ್ಷಮೆ ಯಾಚನೆ ಮಾಡಿದ್ದರು. ಇದೀಗ ಬರ್ಕೆ ಪೊಲೀಸ್ ಠಾಣೆಯ ಪೊಲೀಸರು ಮೂವರನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿದ್ದಾರೆ.

Edited By : Manjunath H D
Kshetra Samachara

Kshetra Samachara

19/09/2021 08:25 pm

Cinque Terre

41.66 K

Cinque Terre

5

ಸಂಬಂಧಿತ ಸುದ್ದಿ