ಮಂಗಳೂರು : ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿ ವೈ ಘಟನೆಯನ್ನು ಕಟುವಾಗಿ ಖಂಡಿಸಿದ್ದು ಕಠಿಣ ಶಿಕ್ಷೆ ಆಗುವ ಮೂಲಕ ಇತರರಿಗೆ ಪಾಠವಾಗಬೇಕಿದೆ. ಅನ್ಯ ರಾಜ್ಯದ ಕಾರ್ಮಿಕರ ಕುರಿತಾಗಿ ಸಮಗ್ರ ಮಾಹಿತಿಯನ್ನು ಅವರನ್ನು ಕರೆದುಕೊಂಡು ಬರುವ ಗುತ್ತಿಗೆದಾರರು ಪಡೆದು ಅದನ್ನು ಪೊಲೀಸ್ ಇಲಾಖೆಯಲ್ಲಿ ದಾಖಲೀಕರಣ ಮಾಡಿ ನಿಗಾ ವಹಿಸುವ ಕೆಲಸ ಅಗಬೇಕಿದೆ.
ಈ ನಿಟ್ಟಿನಲ್ಲಿ ಗೃಹ ಸಚಿವರಲ್ಲಿ ಮನವಿ ಮಾಡಲಾಗುದು ಎಂದು ಹೇಳಿದ್ದಾರೆ.
Kshetra Samachara
24/11/2021 05:10 pm