ಕುಂದಾಪುರ : ವಿಚಾರಣೆಯ ನೆಪದಲ್ಲಿ ಉಪ್ಪಿನಂಗಡಿ ಪೊಲೀಸ್ ಠಾಣೆಗೆ ಕರೆದೊಯ್ದ ಪಾಪ್ಯುಲರ್ ಫ್ರಂಟ್ ನಾಯಕರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ಸಂಘಟನೆಯ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೂ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾತುಕತೆ ನಡೆಸಿದ ಬಳಿಕ ಓರ್ವ ಮುಖಂಡರನ್ನು ಪೋಲಿಸರು ಬಿಟ್ಟು ಕಳಿಸಿದ್ದರು.
ಉಳಿದಿಬ್ಬರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮುಂದುವರಿಸಿದ ಕಾರ್ಯಕರ್ತರ ಮೇಲೆ ಮಂಗಳವಾರ ರಾತ್ರಿ ಪೊಲೀಸರು ಏಕಾಏಕಿ ಲಾಠಿ ಬೀಸಿದ್ದು ಹಲವು ಪ್ರತಿಭಟನಾಕಾರರು ತೀವ್ರವಾಗಿ ಗಾಯಗೊಂಡಿದ್ದಾರೆ.ಈ ಘಟನೆಯ ಸಮಗ್ರ ತನಿಖೆ ನಡೆಸಬೇಕು ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರದ ಕಾರ್ಯದರ್ಶಿ ಲಿಯಾಕತ್ ಕಂಡ್ಲೂರು ಹೇಳಿದರು.
ಲಾಠಿಚಾರ್ಜ್ ಖಂಡಿಸಿ ಕುಂದಾಪುರ ಶಾಸ್ತ್ರೀ ಸರ್ಕಲ್ ನಲ್ಲಿ ಪಿಎಫ್ ಐನಿಂದ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ಖಲೀಲ್ ಗಂಗೋಳ್ಳಿ, ಸಹುದ್ ಶಿರೂರ್, ರಫೀಕ್ ಕಂಡ್ಲೂರು ಉಪಸ್ಥಿತರಿದ್ದರು.
Kshetra Samachara
17/12/2021 01:48 pm