ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಪುತ್ತೂರು: ಹಿಂದೂ ಕಾರ್ಯಕರ್ತನ ಕೊಲೆಗೆ ಶಕುಂತಲಾ ಶೆಟ್ಟಿ ಖಂಡನೆ

ಪುತ್ತೂರು: ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತನ ಕೊಲೆಯ ಆರೋಪಿಗಳನ್ನು ಪೊಲೀಸರು ತಕ್ಷಣವೇ ಬಂಧಿಸಬೇಕೆಂದು ಪುತ್ತೂರು ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಆಗ್ರಹಿಸಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜ್ಯದಲ್ಲಿ ಕೊಲೆ, ಅತ್ಯಾಚಾರ ಮೊದಲಾದ ಘಟನೆಗಳು ಹೆಚ್ಚಾಗುತ್ತಿದ್ದು, ಇದು ರಾಜ್ಯದ ಹಿತದೃಷ್ಟಿಯಿಂದ ಒಳ್ಳೆಯದಲ್ಲ ಎಂದರು. ರಾಜ್ಯ ಸರಕಾರ ಇಂಥ ಘಟನೆಗಳನ್ನು ಮಟ್ಟ ಹಾಕುವ ಕೆಲಸ ಮಾಡಬೇಕು. ರಾಜ್ಯದ ಗೃಹ ಸಚಿವ ಅರಗ ಜ್ಞಾನೇಂದ್ರರ ಜಿಲ್ಲೆಯಲ್ಲೇ ನಡೆಯಬಾರದಿತ್ತು ಎಂದ ಅವರು ಪೊಲೀಸರು ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿದರು.

Edited By : Manjunath H D
Kshetra Samachara

Kshetra Samachara

21/02/2022 04:49 pm

Cinque Terre

14.75 K

Cinque Terre

5

ಸಂಬಂಧಿತ ಸುದ್ದಿ