ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ವಿಶ್ವಹಿಂದೂ ಪರಿಷತ್, ಬಜರಂಗ ದಳ ಪ್ರತಿಭಟನೆ

ಮಂಗಳೂರು: ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆಯನ್ನು ಖಂಡಿಸಿ ವಿಶ್ವಹಿಂದೂ ಪರಿಷತ್-ಬಜರಂಗ ದಳದ ನೇತೃತ್ವದಲ್ಲಿ ಮಂಗಳೂರು ಕದ್ರಿ ಮಲ್ಲಿಕಟ್ಟೆಯಲ್ಲಿ ಪ್ರತಿಭಟನೆ ನಡೆಯಿತು.

ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ.ಪುರಾಣಿಕ್ ಮಾತನಾಡಿ, ಹಿಂದೂ ಧರ್ಮಕ್ಕಾಗಿ, ಸಮಾಜಕ್ಕಾಗಿ, ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿರುವ ಕಾರ್ಯಕರ್ತರ ಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ರೀತಿ ಹತ್ಯೆ ಮಾಡಿದವರ ಮೇಲಿನ ಪ್ರಕರಣಗಳನ್ನು ಸಿದ್ದರಾಮಯ್ಯ ಸರಕಾರ ಓಟ್‌ಬ್ಯಾಂಕ್‌ಗಾಗಿ ಹಿಂಪಡೆದಿತ್ತು. ಈಗಲೂ ಸಮಾಜವಿರೋಧಿ ಶಕ್ತಿಗಳು ವಿಜೃಂಭಿಸುತ್ತಿದ್ದರೂ ಕೂಡ ಬಿಜೆಪಿ ಸರಕಾರ ಸೂಕ್ತ ಕಾರ್ಯಾಚರಣೆ ಮಾಡುವಲ್ಲಿ ವಿಫಲವಾಗಿದೆ. ಸಮಾಜ ವಿರೋಧಿ ಶಕ್ತಿಗಳನ್ನು ದಮನಿಸುವ ಜವಾಬ್ದಾರಿ ಸರಕಾರಕ್ಕಿದೆ. ಈ ಬಗ್ಗೆ ಸರಕಾರ ದೃಢ ನಿಧಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು

Edited By : Manjunath H D
Kshetra Samachara

Kshetra Samachara

24/02/2022 12:57 pm

Cinque Terre

8.18 K

Cinque Terre

0

ಸಂಬಂಧಿತ ಸುದ್ದಿ