ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ಉಡುಪಿ ಪೊಲೀಸರ ತನಿಖಾ ತಂಡ ದೆಹಲಿಗೆ ತೆರಳಿದೆ.
ಆತ್ಮಹತ್ಯೆಗೂ ಮುನ್ನ ಸಂತೋಷ್ ಪಾಟೀಲ್ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದರು. ಅಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಶೇ. 40 ಕಮಿಷನ್ ಆರೋಪ ಮಾಡಿದ್ದರು. ಸಂತೋಷ್ ಪಾಟೀಲ್ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಲು ವ್ಯವಸ್ಥೆ ಮಾಡಿದ್ದು ಯಾರು ಎಂಬ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಬೆಂಗಳೂರು- ಬೆಳಗಾವಿ ಮೂಲದ ಕಾಂಗ್ರೆಸ್ ನಾಯಕರ ವಿಚಾರಣೆ ನಡೆಸಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಡಿಆರ್ ದಾಖಲೆ ಆಧಾರದ ಮೇಲೆ ಪೊಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ.
PublicNext
05/05/2022 01:23 pm