ಉಡುಪಿ: ಲವ್ ಜಿಹಾದ್ ಒಂದು ಪಿಡುಗಾಗಿದ್ದು ತಕ್ಷಣ ಅದು ಕೊನೆಯಾಗಬೇಕು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.
ಮಣಿಪಾಲದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಲವ್ ಜಿಹಾದ್ ನಮ್ಮ ಹೆಣ್ಣುಮಕ್ಕಳನ್ನು ನರಕದ ಕೂಪಕ್ಕೆ ತಳ್ಳುವ ಪ್ರಕ್ರಿಯೆ. ಪ್ರೀತಿಯ ಹೆಸರಲ್ಲಿ ಮದುವೆಯಾಗುತ್ತಾರೆ ಅಥವಾ ಮದುವೆಯಾಗದೆ ಮೋಸ ಮಾಡುತ್ತಾರೆ. ಕೈಗೊಂದು ಮಗುವನ್ನು ಕೊಟ್ಟು ಓಡಿ ಹೋಗುತ್ತಾರೆ.ನಂತರ ತಲಾಖ್ ಎಂದು ಹೇಳಿ ಇನ್ನೊಬ್ಬರನ್ನು ಮದುವೆಯಾಗುತ್ತಾರೆ ಎಂದು ಹೇಳಿದ್ದಾರೆ.
ದೇಶದ ಅನೇಕ ಭಾಗಗಳಲ್ಲಿ ನಮ್ಮ ಹೆಣ್ಣುಮಕ್ಕಳು ಸಮಸ್ಯೆ ಎದುರಿಸುತ್ತಿದ್ದಾರೆ ಎಂದ ಅವರು, ಲವ್ ಜಿಹಾದಿಗೆ ಹೆಣ್ಣುಮಕ್ಕಳು ಬಲಿಯಾದರೆ ತಂದೆ-ತಾಯಿಯ ದುಃಖ ಕೇಳುವವರು ಯಾರು? ಲವ್ ಜಿಹಾದ್ ತಡೆಗೆ ಬಲವಾದ ಕಾನೂನು ಜಾರಿ ಮಾಡುವ ಅಗತ್ಯ ಇದೆ. ಹಿಂದಿನಿಂದಲೂ ಈ ಬಗ್ಗೆ ವಾದ ಮಾಡಿಕೊಂಡು ಬಂದಿದ್ದೇನೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
PublicNext
31/05/2022 11:57 am