ಉಡುಪಿ: ಬಿಜೆಪಿ ಮುಖಂಡ ಯಶ್‌ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಹಾಕಿದ್ದಕ್ಕೆ ಮಲ್ಪೆ ಮೀನುಗಾರರು ಆಕ್ರೋಶಗೊಂಡಿದ್ದಾರೆ. ದ.ಕ. ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಮೀನುಗಾರರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದಾರೆ. ಮೀನುಗಾರರ ಪರವಾದ ಯೋಜನೆಗಳ ಬಗ್ಗೆ ಮುಂಚೂಣಿಯಲ್ಲಿ ನಿಂತು ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸುತ್ತಿರುವ ಅವರಿಗೆ ಜೀವ ಬೆದರಿಕೆ ಹಾಕಿರುವ ಈ ಕೃತ್ಯವನ್ನು ಮೀನುಗಾರ ಸಮುದಾಯ ಖಂಡಿಸುತ್ತದೆ ಎಂದು ಮುಖಂಡರು ಹೇಳಿದ್ದಾರೆ.
ಯಶ್ ಪಾಲ್ ಅವರಿಗೆ ಬೆದರಿಕೆ ಪೋಸ್ಟ್ ಹಾಕಿರುವ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಭದ್ರತೆ ಒದಗಿಸಬೇಕು ಎಂದು ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿ ಕಾರ್ಯದರ್ಶಿ ಕಿಶೋರ್ ಡಿ.ಸುವರ್ಣ ಆಗ್ರಹಿಸಿದರು. ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹತ್ಯೆ ಬೆದರಿಕೆ ಖಂಡಿಸಿ ಕರ್ನಾಟಕ ಕರಾವಳಿಯ ಮೀನುಗಾರರ ಕ್ರಿಯಾ ಸಮಿತಿ ವತಿಯಿಂದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದುಷ್ಕರ್ಮಿಗಳ ವಿರುದ್ಧ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಭದ್ರತೆ ಒದಗಿಸಬೇಕು ಎಂದು ಮನವಿ ಸಲ್ಲಿಸಲಾಯಿತು.
Kshetra Samachara
11/06/2022 01:14 pm