ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: "ಮಸೂದ್ ಕುಟುಂಬಸ್ಥರಿಗೆ ಜಿಲ್ಲಾಡಳಿತ ಪರಿಹಾರ ನೀಡಿ, ಸಮಗ್ರ ತನಿಖೆಗೊಪ್ಪಿಸಿ"

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಕೊಲೆಗೀಡಾದ ಯುವಕನ ಕುಟುಂಬಕ್ಕೆ ನ್ಯಾಯ ದೊರಕಬೇಕು. ಜಿಲ್ಲಾಡಳಿತ ಮೃತ ಯುವಕನ ಕುಟುಂಬಕ್ಕೆ ಪರಿಹಾರ ನೀಡಬೇಕು. ಹಾಗೆಯೇ ಪೊಲೀಸರು ಕೂಲಂಕಶವಾದ ತನಿಖೆ ನಡೆಸಬೇಕು ಎಂದು ಶಾಸಕ ಯು.ಟಿ. ಖಾದರ್ ಆಗ್ರಹಿಸಿದ್ದಾರೆ.

ಮೊನ್ನೆ ಹಲ್ಲೆಗೊಳಗಾಗಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಯುವಕ ಮಸೂದ್ ದಾಖಲಾಗಿದ್ದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಖಾದರ್ ಮಾತನಾಡಿದರು. ಇದೀಗ ಮೃತದೇಹವನ್ನು ವೆನ್ಲಾಕ್‌ ಆಸ್ಪತ್ರೆಗೆ ಕೊಂಡೊಯ್ದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಕುಟುಂಬಸ್ಥರು ಮೃತದೇಹವನ್ನು ಊರಿಗೆ ಕೊಂಡೊಯ್ಯಲಿದ್ದಾರೆ.

Edited By : Manjunath H D
Kshetra Samachara

Kshetra Samachara

21/07/2022 10:04 pm

Cinque Terre

22.89 K

Cinque Terre

3

ಸಂಬಂಧಿತ ಸುದ್ದಿ