ಉಡುಪಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿಯಾದ ಸಚಿವೆ ಶೋಭಾ ಕರಂದ್ಲಾಜೆ, ಕರಾವಳಿಯ ಕೊಲೆ ಪ್ರಕರಣಗಳ ಬಗ್ಗೆ ಗಂಭೀರವಾಗಿ ಪರಿಗಣಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಶೋಭಾ, ರಾಜ್ಯದಲ್ಲಿ ಕೇರಳ ಮಾದರಿ ಹತ್ಯೆಗಳು ನಡೆಯುತ್ತಿವೆ. ನಿರಂತರವಾಗಿ ಹಿಂದೂ ಯುವಕರನ್ನು ಮತಾಂಧರು ಕಗ್ಗೊಲೆ ಮಾಡುತ್ತಿದ್ದಾರೆ. ಈ ಕೊಲೆಗಳಲ್ಲಿ ಸಾಮ್ಯತೆ ಇದೆ ಎಂದು ಹೇಳಿದ್ದಾರೆ.
ಈ ಗಂಭೀರ ಸಮಸ್ಯೆ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ಈ ಕೊಲೆಗಳಿಗೆ ತರಬೇತಿ ಎಲ್ಲಿ ಸಿಗುತ್ತಿದೆ? ಇವುಗಳಿಗೆ ಹಣಕಾಸಿನ ನೆರವು ನೀಡುತ್ತಿರುವವರು ಯಾರು? ಕರ್ನಾಟಕದಲ್ಲಿ ಅವರಿಗೆ ಸ್ಥಳೀಯವಾಗಿ ಬೆಂಬಲಿಸುತ್ತಿರುವವರು ಯಾರು? ಈ ಎಲ್ಲ ವಿಚಾರಗಳ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.
ರಾಜ್ಯದಲ್ಲಿ ಪೊಲೀಸರ ಸಂಖ್ಯೆಯನ್ನು ಹೆಚ್ಚಿಸಬೇಕು ಇತ್ಯಾದಿ ಬೇಡಿಕೆಗಳನ್ನು ಅವರ ಮುಂದಿಟ್ಟಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್ ಷಾ ತಮ್ಮ ಮನವಿಗೆ ಪೂರಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.
PublicNext
02/08/2022 06:30 pm