ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಂಗಳೂರು: ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭ, ಸಿಎಂ ಯಡಿಯೂರಪ್ಪ ಉದ್ಘಾಟನೆ

ಮಂಗಳೂರು: ಮಂಗಳೂರಿನಲ್ಲಿ 20 ವರ್ಷಗಳ ಬಳಿಕ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಆರಂಭಗೊಂಡಿದೆ. ಸಂಜೆಯವರೆಗೆ ನಡೆಯುವ

ಈ ಸಭೆಯನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅಧ್ಯಕ್ಷತೆ ವಹಿಸಿದ್ದಾರೆ. ವಾದ್ಯಘೋಷಗಳೊಂದಿಗೆ ಬಿಜೆಪಿ ನಾಯಕರನ್ನು ಸಮಾರಂಭ ನಡೆಯುವ ಟಿ.ವಿ. ರಮಣ್ ಪೈ ಸಭಾಂಗಣಕ್ಕೆ ಬರಮಾಡಿಕೊಳ್ಳಲಾಯಿತು. ನಂತರ ಬಿ.ಎಸ್. ಯಡಿಯೂರಪ್ಪನವರು ಕಾರ್ಯಕ್ರಮ ಉದ್ಘಾಟಿಸಿದರು.

ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಪ್ರಹ್ಲಾದ ಜೋಶಿ, ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಕಂದಾಯ ಸಚಿವ ಆರ್. ಅಶೋಕ್, ಪಕ್ಷದ ಮುಖಂಡ ಅರವಿಂದ ಲಿಂಬಾವಳಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತಿತರರು ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ವಾಗತಿಸಿದರು.

Edited By : Manjunath H D
Kshetra Samachara

Kshetra Samachara

05/11/2020 12:07 pm

Cinque Terre

15.44 K

Cinque Terre

2

ಸಂಬಂಧಿತ ಸುದ್ದಿ