ಮಂಗಳೂರು: ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರವಿವಾರ ರಾಜ್ಯ ಮಟ್ಟದ 67ನೇ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯಿತು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಕರ್ನಾಟಕದ 280 ಸಹಕಾರಿ ಬ್ಯಾಂಕುಗಳು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದು, ಸಾಲ ನೀಡಿಕೆ ಹಾಗೂ ವಸೂಲಿಯಲ್ಲೂ ನಂಬರ್ ವನ್ ಸ್ಥಾನದಲ್ಲಿವೆ.
ಕೇಂದ್ರ ಸರಕಾರದ ಆತ್ಮ ನಿರ್ಭರ ಯೋಜನೆಯಡಿ ರಾಜ್ಯಕ್ಕೆ ಮೀಸಲಿಟ್ಟ ಅನುದಾನದಲ್ಲಿ ಸಹಕಾರಿ ಕ್ಷೇತ್ರಕೆ 600 ಕೋಟಿ ರೂ. ಒದಗಿಸಬೇಕು ಎಂದು ಕೇಂದ್ರಕ್ಕೆ ಪ್ರಸ್ತಾವ ಕಳುಹಿಸಲಾಗಿದ್ದು, ಈ ರೀತಿ ಪ್ರಸ್ತಾವ ಸಲ್ಲಿಸಿದ ಮೊದಲ ರಾಜ್ಯ ಕರ್ನಾಟಕ ಎಂದರು.
ಸಹಕಾರ ಪತ್ರಿಕೆಯ ವಿಶೇಷ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಅಲ್ಲದೆ ಉತ್ತಮ ನವೋದಯ ಸ್ವ ಸಹಾಯ ಸಂಘಗಳನ್ನು ಪುರಸ್ಕರಿಸಲಾಯಿತು. ಈ ಮುನ್ನ ನಡೆದ ಸಹಕಾರ ಜಾಥಾಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಚಾಲನೆ ನೀಡಿದರು. ಮೇಯರ್ ದಿವಾಕರ ಪಾಂಡೇಶ್ವರ ಸಹಕಾರ ಸಂಘಗಳ ಮಳಿಗೆ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಶಾಸಕ ವೇದವ್ಯಾಸ ಕಾಮತ್, ಸಹಕಾರಿ ಧ್ವಜಾರೋಹಣಗೈದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು, ಮೀನು ಮಾರಾಟ ಮಹಾಮಂಡಲ ಅಧ್ಯಕ್ಷ ಯಶ್ಪಾಲ್ ಸುವರ್ಣ, ಕ್ಯಾಂಪ್ಕೋ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ, ಕೆಎಂಎಫ್ ಅಧ್ಯಕ್ಷ ರವಿರಾಜ ಹೆಗ್ಡೆ, ಸ್ಕ್ಯಾಡ್ಸ್ ಅಧ್ಯಕ್ಷ ರವೀಂದ್ರ ಕಂಬಳಿ, ಎಸ್‌ಸಿಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ರಾಜ್ಯ ಸಹಕಾರ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕಿನ ಅಧ್ಯಕ್ಷ ಷಡಕ್ಷರಿ, ಸಹಕಾರ ಸಂಘಗಳ ನಿಬಂಧಕ ಎಸ್.ಝಿಯಾವುಲ್ಲಾ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಸಹಕಾರ ಸಂಘಗಳ ಅಪರ ನಿಬಂಧಕ ದೇವರಾಜ್ ಸಿ.ಎನ್., ರಾಜ್ಯ ಸಹಕಾರ ಮಾರಾಟ ಮಹಾಮಂಡಳ ವ್ಯವಸ್ಥಾಪಕ ನಿರ್ದೇಶಕ ಆರ್.ಶ್ರೀಧರ್, ಸಹಕಾರ ಸಂಘಗಳ ಉಪ ನಿಬಂಧಕರಾದ ಪ್ರಕಾಶ್ ರಾವ್, ಪ್ರವೀಣ್ ಬಿ. ನಾಯಕ್, ಬಿ.ಕೆ.ಸಲೀಂ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ ಬಿ., ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ರಾಜ್ಯ ಸಹಕಾರ ಮಹಾ ಮಂಡಳ ಆಡಳಿತಾಧಿಕಾರಿ ವೈ.ಎಚ್.ಗೋಪಾಲಕೃಷ್ಣ, ವ್ಯವಸ್ಥಾಪಕ ನಿರ್ದೇಶಕರಾದ ಡಾ.ಕೆ.ಸಿ.ಯತೀಶ್ ಕುಮಾರ್, ಎಸ್.ಎನ್.ಅರುಣ್ ಕುಮಾರ್, ಸಹಕಾರ ಸಂಘಗಳ ಉಪ ನಿರ್ದೇಶಕ ಕೆ.ಎಸ್.ಬಾಲಸುಬ್ರಹ್ಮಣ್ಯ, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುರುಷೋತ್ತಮ್ ಉಪಸ್ಥಿತರಿದ್ದರು.
Kshetra Samachara
16/11/2020 11:15 am