ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಗೃಹ ಸಚಿವರಿಂದ ಉಡುಪಿಯಲ್ಲಿ ಕನಕದಾಸ ಜಯಂತಿ ಆಚರಣೆ

ಉಡುಪಿ: ಉಡುಪಿ ಜಿಲ್ಲಾಡಳಿತದಿಂದ ಇಂದು ಕನಕದಾಸರ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.ಮಣಿಪಾಲದ ರಜತಾದ್ರಿಯಲ್ಲಿ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಬಸವರಾಜ ಬೊಮ್ಮಾಯಿ ಕನಕಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕನಕ ಜಯಂತಿ ಆಚರಣೆ ನಡೆಸಲಾಯಿತು.ಉಡುಪಿ ಶಾಸಕ ರಘುಪತಿ ಭಟ್ ,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ,ಜಿಲ್ಲಾಧಿಕಾರಿ ಜಿ.ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.ಬಸವರಾಜ ಬೊಮ್ಮಾಯಿ ಇಂದು ಉಡುಪಿ ಜಿಲ್ಲಾ ಪ್ರವಾಸದಲ್ಲಿದ್ದು ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಜಿಲ್ಲೆಗೆ ಆಗಮಿಸಿದ ಸಚಿವರಿಗೆ ಪೊಲೀಸ್ ಇಲಾಖೆ ವತಿಯಿಂದ ಗೌರವ ವಂದನೆ ನೀಡಲಾಯಿತು.

Edited By : Nagesh Gaonkar
Kshetra Samachara

Kshetra Samachara

03/12/2020 11:59 am

Cinque Terre

10.95 K

Cinque Terre

0

ಸಂಬಂಧಿತ ಸುದ್ದಿ